ವೀರಾಜಪೇಟೆ, ಸೆ. ೧೨: ಅಮ್ಮತ್ತಿ ಕಾರ್ಮಾಡು ಗ್ರಾಮದ ಮುತ್ತಪ್ಪ ಎಂಬವರ ಪತ್ನಿ ರೇಷ್ಮಾ (೪೦) ನೇಣು ಬಿಗಿದುಕೊಂಡು ಆತ್ಮಹತ್ಯಗೆ ಶರಣಾಗಿದ್ದಾರೆ.
ಮೃತ ಮಹಿಳೆ ಒಂದು ವರ್ಷದಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ತಾ. ೧೨ ರಂದು ಮನೆಯ ಹಿಂಭಾಗದಲ್ಲಿರುವ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಮುತ್ತಪ್ಪ ಹೊರಹೋಗಿದ್ದು, ಮನೆಯಲ್ಲಿದ್ದ ಮಗ ಹುಡುಕಾಟ ನಡೆಸಿದಾಗ ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಆಗಮಿಸಿ ಮಾಹಿತಿ ಪಡೆದು ವೀರಾಜಪೇಟೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶರೀರವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.