ಶನಿವಾರಸಂತೆ, ಸೆ. ೧೨: ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಠಾಣಾಧಿಕಾರಿಯಾಗಿ ವರ್ಗಾವಣೆಗೊಂಡಿರುವ ಹೆಚ್.ಇ. ದೇವರಾಜ್ ಅವರಿಗೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಕೊಡಗು ಜಿಲ್ಲಾ ರಕ್ಷಣಾ ವೇದಿಕೆಯ ಸಿಂಹಸೇನೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಪ್ರಧಾನ ಕಾರ್ಯದರ್ಶಿ ಸಿ.ಸಿ. ಲೋಕೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಹೊಳಳ್ಳಿ ವೀರೇಶ್ ಹಾಗೂ ಮುಖಂಡ ಶಿವಕುಮಾರ್, ಶನಿವಾರಸಂತೆ ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಶಿವಲಿಂಗ, ಮುಖ್ಯಪೇದೆ ಶಶಿಕುಮಾರ್, ಸಿಬ್ಬಂದಿ ಪೂರ್ಣಿಮ, ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.