ಮಡಿಕೇರಿ, ಸೆ.೧೧: ಮಕ್ಕಂದೂರು ಗ್ರಾಮ ಪಂಚಾಯಿತಿಯ ೨೦೨೦-೨೧ನೇ ಸಾಲಿನ ಜಮಾಬಂಧಿ ಸಭೆ ತಾ. ೧೫ರಂದು ಪೂರ್ವಾಹ್ನ ೧೦.೩೦ ಗಂಟೆಗೆ ಮಕ್ಕಂದೂರು ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷ ಕನ್ನಿಕಂಡ ಶ್ಯಾಂ ಸುಬ್ಬಯ್ಯ ಅವರ ಅಧ್ಯಕ್ಷತೆಯಲ್ಲಿ ಹಾಗೂ ನೋಡಲ್ ಅಧಿಕಾರಿ ಮೋಹನ್ (ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಮಡಿಕೇರಿ) ಇವರ ಉಪಸ್ಥಿತಿಯಲ್ಲಿ ನಡೆಯಲಿದೆ.