ನಾಪೋಕ್ಲು, ಸೆ. ೧೧: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಮತ್ತು ನಾಪೋಕ್ಲು ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ ಪೋಷಣ ಮಾಸಾಚರಣೆ ಮತ್ತು ಮಾತೃವಂದನಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಆಗಮಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅರುಂಧತಿ ಮಾತನಾಡಿ ಗರ್ಭಿಣಿಯರು ಪೌಷ್ಠಿಕಾಂಶಯುಕ್ತ ಆಹಾರವನ್ನು ಸ್ಥಳೀಯವಾಗಿಯೇ ಸಿಗುವಂತಹ ಆಹಾರವನ್ನು ಬೆಳೆಸಿ ಉತ್ತಮವಾದ ಆರೋಗ್ಯವನ್ನು ಕಾಪಾಡಿಕೊಂಡರೆ ಶಿಶು ಮರಣವನ್ನು ಕಡಿಮೆ ಮಾಡಬಹುದಾಗಿದೆ ಎಂದರು ನಮ್ಮ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಸ್ಥಳೀಯ ಅಂಗನವಾಡಿ ಕೇಂದ್ರಗಳಿAದ ಪಡೆದುಕೊಳ್ಳುವಂತೆ ಸೂಚಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್.ಎಸ್. ಪಾರ್ವತಿ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹಮ್ಮದ್ ಖುರೇಶಿ, ಗ್ರಾಮ ಪಂಚಾಯಿತಿ ಸದಸ್ಯರುಗಳು, ಅಂಗನವಾಡಿ ಕಾರ್ಯ ಕರ್ತೆಯರು, ಆಶಾ ಕಾರ್ಯ ಕರ್ತೆಯರು, ಆರೋಗ್ಯ ಇಲಾಖೆಯ ಕಾರ್ಯಕರ್ತೆಯರು, ಇದ್ದರು. ಅಂಗನವಾಡಿ ಕಾರ್ಯಕರ್ತೆ ಆಶಾಲತ ಸ್ವಾಗತಿಸಿದರು, ಪವಿತ್ರ ವಂದಿಸಿದರು.