ಸೋಮವಾರಪೇಟೆ, ಸೆ. ೧೨: ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲ ಎಸ್.ಸಿ. ಮೋರ್ಚಾದ ಸಭೆ ಇಲ್ಲಿನ ಪಕ್ಷದ ಕಚೇರಿಯಲ್ಲಿ ಅಧ್ಯಕ್ಷ ಹೆಚ್.ಸಿ. ರಾಮಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಮೋರ್ಚಾದ ಜಿಲ್ಲಾಧ್ಯಕ್ಷ ಎಸ್.ಎ. ಪ್ರತಾಪ್, ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಎಸ್.ಸಿ. ಮೋರ್ಚಾ ಜಿಲ್ಲಾ ಖಜಾಂಚಿ ಕೃಷ್ಣಕುಮಾರ್, ಮಂಡಲ ಖಜಾಂಚಿ ಮಂಜುನಾಥ್, ಮಂಡಲ ಪ್ರಧಾನ ಕಾರ್ಯದರ್ಶಿ ದುಷ್ಯಂತ್‌ಕುಮಾರ್, ಸಾಮಾಜಿಕ ಜಾಲತಾಣ ಪ್ರಕೋಷ್ಠದ ಪ್ರಿಜೇಶ್ ನಾಯರ್ ಸೇರಿದಂತೆ ಇತರರು ಭಾಗವಹಿಸಿದ್ದರು.