ಸರ್ವದೈವತಾ ವಿದ್ಯಾಸಂಸ್ಥೆ

ಗೋಣಿಕೊಪ್ಪ ವರದಿ: ರ‍್ವತ್ತೋಕ್ಲು ಸರ್ವದೈವತಾ ವಿದ್ಯಾ ಸಂಸ್ಥೆಯಿAದ ಶಿಕ್ಷಕರಿಗೆ ವಿಶೇಷ ಗೌರವ ನೀಡುವ ಮೂಲಕ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಶೈಕ್ಷಣಿಕ ಚಟುವಟಿಕೆಯಲ್ಲಿ ಪ್ರತಿ ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನಿಸಲಾಯಿತು. ೨೭ ಶಿಕ್ಷಕಿಯರಿಗೆ ಕಿರು ಕಾಣಿಕೆ ನೀಡಿ ಗೌರವಿಸಲಾಯಿತು. ವಿದ್ಯಾ ಸಂಸ್ಥೆ ಅಧ್ಯಕ್ಷ ಕಾಡ್ಯಮಾಡ ಪ್ರಕಾಶ್ ಮೊಣ್ಣಪ್ಪ ಮಾತನಾಡಿ, ವಿದ್ಯಾರ್ಥಿಯನ್ನು ವಿಶ್ವಮಾನವನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರದ್ದು. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಪ್ರತಿಭೆ ಅರಿತು ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು. ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಮಾತನಾಡಿ, ಶಿಕ್ಷಕರ ಪಾತ್ರ ಮಹತ್ವದ್ದು, ಜೀವನದ ಮೌಲ್ಯ ಹೆಚ್ಚಿಸಲು ಶಿಕ್ಷಣದ ಅನಿವಾರ್ಯತೆ ಇದೆ ಎಂದರು. ಕೀರ್ತನವರಿಂದ ನೃತ್ಯ ಕಾರ್ಯಕ್ರಮ ನಡೆಯಿತು. ಪರ್ವಿನ್ ತಾಜ್, ವಿದ್ಯಾ, ಜೆ.ಜಿ. ಲೀನಾ ಶಿಕ್ಷಕರ ದಿನಾಚರಣೆ ಮಹತ್ವದ ಬಗ್ಗೆ ಮಾತನಾಡಿದರು. ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಲಲಿತಾ ಮೊಣ್ಣಪ್ಪ, ಆಡಳಿತ ಅಧಿಕಾರಿ ಆದಿತ್ಯ ಅಯ್ಯಪ್ಪ, ಪ್ರೌಢಶಾಲೆ ಮುಖ್ಯ ಶಿಕ್ಷಕ ಪೊನ್ನಿಮಾಡ ಪ್ರದೀಪ್, ಪ್ರಾಥಮಿಕ ಶಾಲಾ ಮನೆಯಪಂಡ ಶೀಲಾ ಬೋಪಣ್ಣ ಇದ್ದರು.