ಮಡಿಕೇರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಕೊಡಗು ಹಾಗೂ ಸ್ಥಳೀಯ ಸಂಸ್ಥೆ ಕುಶಾಲನಗರದ ಆಶ್ರಯದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಹಾಗೂ ಶಿಕ್ಷಕ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕುಶಾಲನಗರದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ತರಬೇತಿ ಆಯುಕ್ತ ಸುರೇಶ್ ಕುಮಾರ್ ಎನ್.ಎಲ್. ಅವರು ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಯಲ್ಲಿ ದೀರ್ಘಕಾಲ ಅತ್ಯುತ್ತಮವಾಗಿ ಸೇವೆಸಲ್ಲಿಸಿದ್ದ ಸ್ಕೌಟ್ ಮಾಸ್ಟರ್ ಎಂ.ಎಸ್. ಗಣೇಶ್, ಗೈಡ್ ಕ್ಯಾಪ್ಟನ್ ರಮ್ಮಿ ಅವರನ್ನು ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಜಿಮ್ಮಿ ಸಿಕ್ವೇರಾ ಜಿಲ್ಲಾ ಆಯುಕ್ತರು (ಸ್ಕೌಟ್), ಕುಶಾಲನಗರ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಗಳಾದ ದೇವಾನಂದ, ಸೋಮವಾರಪೇಟೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಗಳಾದ ಚಂದ್ರಶೇಖರ್ ಟಿ.ಎಸ್., ಶಾಲೆಯ ಮುಖ್ಯೋಪಾಧ್ಯಾಯಿನಿ ಭಾರತಿ, ಜಿಲ್ಲಾ ಸಂಘಟಕರಾದ ಧಮಯಂತಿ ಯು.ಸಿ., ಎಸ್.ಜಿ.ವಿ. ಆದ ಕುಮಾರಿ ರಂಜಿನಿ ಹಾಗೂ ಶಿಕ್ಷಕ ವೃಂದದವರು ಮತ್ತು ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕುಶಾಲನಗರ ಪೃಥ್ವಿ ಜೂವರ‍್ಸ್
ಗುಡ್ಡೆಹೊಸೂರು: ಇಲ್ಲಿಗೆ ಸಮೀಪದ ಕುಶಾಲನಗರದ ಪೃಥ್ವಿ ಜೂವರ‍್ಸ್ ವತಿಯಿಂದ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭ ೨೦೨೦-೨೧ನೇ ಸಾಲಿನಲ್ಲಿ ನಿವೃತ್ತಿಯಾದ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ ಸರಕಾರಿ ಶಾಲೆಯ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಸರಕಾರಿ ಶಾಲೆಯಲ್ಲಿ ವ್ಯಾಸಾಂಗ ಮಾಡಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕೇಶವ ಮತ್ತು ನಿವೃತ್ತ ಶಿಕ್ಷಕ ಪ್ರಕಾಶ್, ಸೋಮವಾರಪೇಟೆಯ ಮುಖ್ಯ ಆರೋಗ್ಯ ಅಧಿಕಾರಿ ಶಾಂತಿರಾಜ್ ಹಾಗೂ ಪೃಥ್ವಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.ಶಿಕ್ಷಕರಿಗೆ ‘ನೇಷನ್ ಬಿಲ್ಡರ್’ ಗೌರವ
ಗೋಣಿಕೊಪ್ಪ ವರದಿ: ಇಬ್ಬರು ಶಿಕ್ಷಕರನ್ನು ಸನ್ಮಾನಿಸುವ ಮೂಲಕ ಗೋಣಿಕೊಪ್ಪ ರೋಟರಿ ಸಂಸ್ಥೆ ವತಿಯಿಂದ ನೇಷನ್ ಬಿಲ್ಡರ್ ಗೌರವ ನೀಡಲಾಯಿತು. ಕಕೂನ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಬೆಂಜಾAಡ ರಶ್ಮಿ ದೇವಯ್ಯ, ಕಲಾ ಕ್ಷೇತ್ರದಲ್ಲಿ ಎನ್. ರಮೇಶ್ ಅವರನ್ನು ಗೌರವಿಸಲಾಯಿತು.
ಗೋಣಿಕೊಪ್ಪ ರೋಟರಿ ಸಂಸ್ಥೆ ಅಧ್ಯಕ್ಷೆ ತೀತಮಾಡ ಎಂ. ಕಾವೇರಮ್ಮ ಮಾತನಾಡಿ, ರಾಷ್ಟಿçÃಯ ಶಿಕ್ಷಣ ನೀತಿಯಲ್ಲಿ ಕೌಶಲ್ಯ ಆಧಾರಿತ ಪ್ರೋತ್ಸಾಹ ಅಗತ್ಯ ಇದೆ. ಈ ನಿಟ್ಟಿನಲ್ಲಿ ಶಿಕ್ಷಣ ಮತ್ತು ನೃತ್ಯ ಶಾಲೆಯ ಮೂಲಕ ಮಕ್ಕಳಲ್ಲಿ ಕಲಾಭಿಮಾನ ಬಿತ್ತರಿಸುತ್ತಿರುವ ಶಿಕ್ಷಕರನ್ನು ಸನ್ಮಾನಿಸಲಾಗಿದೆ ಎಂದು ತಿಳಿಸಿದರು.
ಕಾರ್ಯದರ್ಶಿ ಜೆ. ಕೆ. ಸುಭಾಷಿಣಿ, ಪದಾಧಿಕಾರಿ ಎಂ. ಕೆ. ದೀನಾ, ಅರುಣ್ ತಮ್ಮಯ್ಯ, ಆಶಿಕ್ ಚೆಂಗಪ್ಪ, ರೀಟಾ ದೇಚಮ್ಮ ಇದ್ದರು.ಗೋಣಿಕೊಪ್ಪ ಲಯನ್ಸ್ ಕ್ಲಬ್
ಗೋಣಿಕೊಪ್ಪಲು: ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿದರಿಂದ ಆತ್ಮತೃಪ್ತಿ ಹಾಗೂ ಆತ್ಮವಿಶ್ವಾಸ ಹೆಚ್ಚಿದೆ ಎಂದು ಲಯನ್ಸ್ ಪಿ.ಯು. ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಕೆ.ಸಿ. ಪವಿತ್ರ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಣಿಕೊಪ್ಪಲುವಿನ ಲಯನ್ಸ್ ಶಾಲೆಯ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಲಯನ್ಸ್ ಸಂಸ್ಥೆಯ ವತಿಯಿಂದ ಸನ್ಮಾನ ಗೌರವ ಸ್ವೀಕರಿಸಿ ಮಾತನಾಡಿದ ಇವರು, ಬಾಲ್ಯದಿಂದಲೇ ಶಿಕ್ಷಕ ವೃತ್ತಿಯ ಮೇಲೆ ಅಪಾರ ಪ್ರೀತಿ ಹೊಂದಿದ್ದೆ ಅದರಂತೆ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದೇನೆ. ಶಿಕ್ಷಕ ವೃತ್ತಿಯ ಅವಧಿಯಲ್ಲಿ ಮಾಡಿದ ಉತ್ತಮ ಸೇವೆಯನ್ನು ಗಮನಿಸಿ ಸಂಸ್ಥೆಯು ಗೌರವ ನೀಡಿರುವುದು ಶ್ಲಾಘನೀಯ ಎಂದರು.
ಲಯನ್ಸ್ ಕ್ಲಬ್‌ನ ಅಧ್ಯಕ್ಷ ಪಿ.ಎಂ.ಜೀವನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಕೊಂಡೊಯ್ಯುವ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿದ್ದಾರೆ. ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಸಂಸ್ಥೆಯು ಸದಾ ಚಿರಋಣಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಪಿ.ಯು. ಕಾಲೇಜಿನ ಪ್ರಾಂಶುಪಾಲೆ ಲತ ಬೋಪಣ್ಣ, ಪ್ರೌಢಶಾಲೆಯ ಮುಖ್ಯೋಪಾದ್ಯಾಯಿನಿ ಎ.ಸಿ.ಅಕ್ಕಮ್ಮ, ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯಿನಿ ತಾಜ್ ತಂಗಮ್ಮ, ನಿವೃತ್ತ ಪ್ರಾಂಶುಪಾಲೆ ಕವಿತ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಮನ್ನಕ್ಕಮನೆ ಬಾಲಕೃಷ್ಣ, ಲಯನ್ಸ್ ಟ್ರಸ್ಟ್ನ ಅಧ್ಯಕ್ಷ ಎಸ್.ಚಂಗಪ್ಪ, ಉಪಾಧ್ಯಕ್ಷ ಪಿ.ಎನ್. ಪೆಮ್ಮಯ್ಯ, ಕಾರ್ಯದರ್ಶಿ ಪಟ್ಟಡ ಧನುಉತ್ತಯ್ಯ, ಖಜಾಂಚಿ ಶರತ್‌ದೇವಯ್ಯ, ಸಿ.ಎಂ.ಗೌತಮ್, ಮಾಜಿ ಲಯನ್ಸ್ ಜಿಲ್ಲಾ ರಾಜ್ಯಪಾಲ, ಸಿ.ಎ.ಮುತ್ತಣ್ಣ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲಯನ್ಸ್ ಸಂಸ್ಥೆಯ ಅಧ್ಯಕ್ಷ ಪಿ.ಎಂ.ಜೀವನ್ ಸ್ವಾಗತಿಸಿದರು. ಕಾರ್ಯದರ್ಶಿ ಮನ್ನಕ್ಕಮನೆ ಬಾಲಕೃಷ್ಣ ವಂದಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಪ್ರಮುಖರು, ಶಿಕ್ಷಕವೃಂದ, ಉಪಸ್ಥಿತರಿದ್ದರು.