ಮುಳ್ಳೂರು, ಸೆ. ೧೨: ಕೋವಿಡ್ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ವೈದ್ಯರು, ಆರೋಗ್ಯ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಪೊಲೀಸರು ಕೋವಿಡ್ ವಿರುದ್ಧ ಹೋರಾಡುತ್ತಿರುವ ಸಮೂಹ ವಾರಿಯರ್ಸ್ಗಳ ಕಾರ್ಯ ಶ್ಲಾಘನಿಯಕರವಾಗಿದೆ ಎಂದು ರೋಟರಿ ಕ್ಲಬ್ ಜಿಲ್ಲಾ ಉಪ ರಾಜ್ಯಪಾಲ ಎಚ್.ಟಿ. ಅನಿಲ್ ಅಭಿಪ್ರಾಯಪಟ್ಟರು. ಅವರು ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ಗುಡುಗಳಲೆ ಆರ್.ವಿ. ಕಲ್ಯಾಣ ಮಂಟಪದಲ್ಲಿ ಕೋವಿಡ್ ವಿರುದ್ದ ಹೋರಾಡುತ್ತಿರುವ ವಾರಿಯರ್ಸ್ ಹಾಗೂ ವಿವಿಧ ಸಾಧಕರಿಗಾಗಿ ಹಮ್ಮಿಕೊಂಡಿದ್ದ ಗೌರವ-ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೊರೊನಾದಿಂದಾಗಿ ಜನರು ಸಂಕಷ್ಟ ಎದುರಿಸುತ್ತಿರುವ ಈ ಕಠಿಣ ಮುಳ್ಳೂರು, ಸೆ. ೧೨: ಕೋವಿಡ್ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ವೈದ್ಯರು, ಆರೋಗ್ಯ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಪೊಲೀಸರು ಕೋವಿಡ್ ವಿರುದ್ಧ ಹೋರಾಡುತ್ತಿರುವ ಸಮೂಹ ವಾರಿಯರ್ಸ್ಗಳ ಕಾರ್ಯ ಶ್ಲಾಘನಿಯಕರವಾಗಿದೆ ಎಂದು ರೋಟರಿ ಕ್ಲಬ್ ಜಿಲ್ಲಾ ಉಪ ರಾಜ್ಯಪಾಲ ಎಚ್.ಟಿ. ಅನಿಲ್ ಅಭಿಪ್ರಾಯಪಟ್ಟರು. ಅವರು ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ಗುಡುಗಳಲೆ ಆರ್.ವಿ. ಕಲ್ಯಾಣ ಮಂಟಪದಲ್ಲಿ ಕೋವಿಡ್ ವಿರುದ್ದ ಹೋರಾಡುತ್ತಿರುವ ವಾರಿಯರ್ಸ್ ಹಾಗೂ ವಿವಿಧ ಸಾಧಕರಿಗಾಗಿ ಹಮ್ಮಿಕೊಂಡಿದ್ದ ಗೌರವ-ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೊರೊನಾದಿಂದಾಗಿ ಜನರು ಸಂಕಷ್ಟ ಎದುರಿಸುತ್ತಿರುವ ಈ ಕಠಿಣ ವೈದ್ಯಾಧಿಕಾರಿ ಡಾ. ಸುಪರ್ಣ ಕೃಷ್ಣಾನಂದ್ ಸನ್ಮಾನ ಸ್ವೀಕರಿಸಿ ಮಾತನಾಡಿ, ಸರಕಾರದ ಮಾರ್ಗ ಸೂಚಿಯನ್ನು ಪ್ರತಿಯೊಬ್ಬರೂ ಪಾಲಿಸುವುದರಿಂದ ಕೋವಿಡ್ ಮಹಾಮಾರಿಯನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದರು.

ಶನಿವಾರಸಂತೆ ರೋಟರಿ ಕ್ಲಬ್ ಅಧ್ಯಕ್ಷ ಹೆಚ್.ಪಿ. ಮೋಹನ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ವಲಯ ಕಾರ್ಯದರ್ಶಿ ಹೆಚ್.ಎಸ್. ವಸಂತ್‌ಕುಮಾರ್, ವಲಯ ಸೇನಾನಿ ಟಿ.ಆರ್. ಪುರುಷೋತ್ತಮ್ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ಎಚ್.ಆರ್. ದಿವಾಕರ್, ರೋಟರಿ ಕ್ಲಬ್ ಹಾಲಿ ಕಾರ್ಯದರ್ಶಿ ಎಂ.ಎಸ್. ವಸಂತ್, ನಿಕಟಪೂರ್ವ ಕಾರ್ಯದರ್ಶಿ ಎ.ಡಿ. ಮೋಹನ್‌ಕುಮಾರ್, ಮಹಿಳಾ ರೋಟರಿ ಸದಸ್ಯೆ ಶ್ವೇತಾ ವಸಂತ್ ಹಾಗೂ ರೋಟರಿ ಕ್ಲಬ್ ಸದಸ್ಯರುಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್ ಸಾಧಕಿಯರಾದ ಡಾ. ಸುಪರ್ಣ ಕೃಷ್ಣಾನಂದ್, ಆಶಾ ಕಾರ್ಯಕರ್ತೆ ರೂಪ ಸಂತೋಷ್, ಶಿಕ್ಷಣ ಕ್ಷೇತ್ರದ ಸಾಧಕಿ ನಿವೃತ್ತ ಮುಖ್ಯ ಶಿಕ್ಷಕಿ ಸರೋಜಮ್ಮ ಅವರುಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹತ್ತನೆ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ರೋಟರಿ ಸಂಸ್ಥೆಯಿAದ ಗೌರವಿಸಲಾಯಿತು.