ಗುಡ್ಡೆಹೊಸೂರು, ಸೆ. ೧೧: ಇಲ್ಲಿಗೆ ಸಮೀಪದ ರಸಲ್‌ಪುರ ಬಾಳುಗೋಡು ಗ್ರಾಮದ ಖಾನ್ ಎಂಬವರ ಕಾಫಿ ತೋಟದಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ೨ ಹುಲಿಗಳು ತೋಟದಲ್ಲಿ ಸಂಚರಿಸುತ್ತಿರುವುದಾಗಿ ಅಂದಾಜಿಸಲಾಗಿದ್ದು, ಹುಲಿಯ ಹೆಜ್ಜೆ ಗುರುತು ಪತ್ತೆಯಾದ ಹಿನ್ನೆಲೆ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಅರಣ್ಯ ಇಲಾಖೆ ಹುಲಿ ಸೆರೆಗೆ ಸೂಕ್ತ ಕ್ರಮ ವಹಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.