ಮಡಿಕೇರಿ, ಸೆ. ೧೪: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕೊಡಗು ಜಿಲ್ಲೆ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಡಗು ಜಿಲ್ಲೆ, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್, ಕೊಡಗು ಶಾಖೆ ಹಾಗೂ ಜಿಲ್ಲಾ ದಿವ್ಯಾಂಗರ ಒಕ್ಕೂಟ, ಕೊಡಗು ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯ ಬಾಲಭವನದಲ್ಲಿ ಮಡಿಕೇರಿ ತಾಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ತಾಲೂಕು ಮಟ್ಟದ “ಕೋವಿಡ್ ಗೃಹಾಧಾರಿತ ಆರೈಕೆ ಮತ್ತು ಬ¯ವರ್ಧನ” ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿಗಳಾದ ವಿಮ¯ ಕೆ. ಜಿ. ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು ಕೋವಿಡ್-೧೯ ಸಂದರ್ಭದಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು ಸಂತಸ ತಂದಿದೆ. ಅಲ್ಲದೆ ಇಂತಹ ಕಾರ್ಯಕ್ರಮಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲಹೆ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ದಿವ್ಯಾಂಗರ ಒಕ್ಕೂಟ ಅಧ್ಯಕ್ಷರಾದ ಮಹೇಶ್ವರ್ ಜೆ. ಅವರು ಈ ಕೋವಿಡ್ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯವರು ಇಂತಹ ತರಬೇತಿ ಕಾರ್ಯಾಗಾರವನ್ನು ನಡೆಸುತ್ತಿರುವುದು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಹೆಚ್ಚಿನ ಅರಿವನ್ನು ಮೂಡಿಸುವುದರ ಜೊತೆಗೆ ಕೋವಿಡ್ ಬಗ್ಗೆ ಸಮಗ್ರ ಮಾಹಿತಿಯನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ ಎಂದು ತಿಳಿಸಿದರು.

ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ನಿರ್ದೇಶಕರಾದ ಡಾ|| ರೇಖಾ ಷಣ್ಮುಖ ಅವರು ಕೋವಿಡ್-೧೯ ರಿಂದ ಉಂಟಾದ ಕಷ್ಟ-ನಷ್ಟ ಹಾಗೂ ಸಾವು-ನೋವುಗಳ ವಿಚಾರಗಳ ಬಗ್ಗೆ ಚರ್ಚಿಸುತ್ತಾ ಈ ಕೋವಿಡ್-೧೯ ನಿಂದ ತಮ್ಮ ಹಾಗೂ ಸುತ್ತ-ಮುತ್ತಲಿನ ಜನರಿಗೆ ಕೋವಿಡ್-೧೯ ಕುರಿತಾಗಿ ಜಾಗೃತಿ ಮೂಡಿಸುವಂತಾಗ ಬೇಕೆಂದರು. ಎಸ್.ವಿ.ವೈ.ಎಂ. ಸಂಸ್ಥೆಯ ಯೋಜನಾ ನಿರ್ದೇಶಕರಾದ ಜಯಕುಮಾರ್ ಕೆ. ಮತ್ತು ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಅಂಕಾಚಾರಿ ಹಾಗೂ ಸಿಬ್ಬಂದಿ ವರ್ಗದವರು, ವಿಕ¯ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಿಬ್ಬಂದಿ ವರ್ಗದವರು ಮತ್ತು ಜಿಲ್ಲಾ ದಿವ್ಯಾಂಗರ ಒಕ್ಕೂಟ ಕೊಡಗು ಜಿಲ್ಲೆಯ ಪದಾಧಿಕಾರಿಗಳು ಭಾಗವಹಿಸಿದ್ದರು.