ಮಡಿಕೇರಿ, ಸೆ. ೧೪: ಜಿಲ್ಲೆಯಲ್ಲಿ ಮಂಗಳವಾರ ೧೫ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೮ ಆರ್‌ಟಿಪಿಸಿಆರ್ ಮತ್ತು ೭ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ ೨, ಸೋಮವಾರಪೇಟೆ ತಾಲೂಕಿನಲ್ಲಿ ೬, ವೀರಾಜಪೇಟೆ ತಾಲೂಕಿನಲ್ಲಿ ೭ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.

೧೫ ಕೋವಿಡ್ ಪ್ರಕರಣಗಳು

(ಮೊದಲ ಪುಟದಿಂದ) ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೪,೩೪೪ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೦ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೩,೩೮೪ ಮಂದಿ ಗುಣಮುಖರಾಗಿದ್ದಾರೆ. ೫೩೯ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧ ಸಾವು ಉಂಟಾಗಿದ್ದು, ಇದುವರೆಗೆ ಒಟ್ಟು ೪೨೧ ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೬೨ ಆಗಿzವೆ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. ೦.೪ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.