ಮಡಿಕೇರಿ, ಸೆ. ೧೪: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರೆಭಾಷೆ ಗೌಡ ಅಧ್ಯಯನ ಪೀಠ ಸ್ಥಾಪನೆ ಕೈಬಿಡಲಾಗಿದೆ ಎಂದು ಅಧಿವೇಶನದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ ನಾರಾಯಣಗೌಡ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಪ್ರಶ್ನೆಗೆ ಉತ್ತರಿಸಿದರು.

ಕೊಡಗು, ಪುತ್ತೂರು, ಸುಳ್ಯ ಮತ್ತು ರಾಜ್ಯದ ಇತರೆಡೆ ವಾಸವಾಗಿರುವ ಅರೆಭಾಷೆ ಗೌಡ ಜನಾಂಗದ ಅಧ್ಯಯನ ಪೀಠ ಆರಂಭಿಸುವುದು ಸರಕಾರದ ಗಮನಕ್ಕೆ ಬಂದಿದೆಯೇ.? ಎಂದು ವೀಣಾ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವರು, ಕೋವಿಡ್-೧೯ ಪರಿಸ್ಥಿತಿಯನ್ನು ನಿಭಾಯಿಸಿ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲವನ್ನು ಕ್ರೋಡೀಕರಿಸುವುದು ಅಗತ್ಯವಾಗಿದ್ದು, ಇದಕ್ಕಾಗಿ ಸರಕಾರದ ವೆಚ್ಚದ ಬಾಬ್ತಿನಲ್ಲಿ ಮಿತವ್ಯಯ ಪಾಲಿಸುವ ಅವಶ್ಯಕತೆ ಇರುವ ಕಾರಣ ಅಧ್ಯಯನ ಪೀಠ ಪ್ರಾರಂಭಿಸುವ ಪ್ರಸ್ತಾವನೆಯನ್ನು ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.