ಮಡಿಕೇರಿ, ಸೆ. ೧೪: ನಗರದ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಶಾಂತಿನಿಕೇತನ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕೂರಿಸಿ ಮೆರವಣಿಗೆ ಸಾಗಿ ಗೌರಿಕೆರೆಯಲ್ಲಿ ವಿಸರ್ಜಿಸಲಾಯಿತು.

ತಾ. ೧೦ ರಂದು ಪ್ರತಿಷ್ಠಾಪಿಸಿದ್ದ ಮೂರ್ತಿಗೆ ನಿತ್ಯ ವಿಶೇಷ ಪೂಜೆ ಸಲ್ಲಿಸಲಾಗುತ್ತಿತ್ತು. ಮಂಗಳವಾರ ಮಹಾಪೂಜೆ ಸಲ್ಲಿಸಿದ ಬಳಿಕ ಮೂರ್ತಿಯನ್ನು ವಿಸರ್ಜಿಸಲಾಯಿತು. ಪ್ರತಿವರ್ಷ ಅದ್ಧೂರಿಯಾಗಿ ಗಣೇಶ ವಿಸರ್ಜನೆ ಮಾಡುವ ಸಮಿತಿ ಈ ಬಾರಿ ಕೊರೊನಾ ಹಿನ್ನೆಲೆ ಮಾರ್ಗಸೂಚಿ ಅನ್ವಯ ಸರಳವಾಗಿ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು.