ಮಡಿಕೇರಿ, ಸೆ. ೧೪: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಪ್ರತೀ ವರ್ಷದಂತೆ ಈ ವರ್ಷವೂ ಪ್ರಗತಿಪರ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಯನ್ನು ಕೃಷಿ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಿದೆ. ಈ ಪ್ರಶಸ್ತಿಗಳಿಗೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಿಂದ ಜಿಲ್ಲೆಗೊಬ್ಬರಂತೆ ರೈತ ಮತ್ತು ರೈತ ಮಹಿಳೆಯನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಮಗ್ರ ಕೃಷಿ ಪದ್ಧತಿಯನ್ನು ಪಾಲನೆ ಮಾಡುತ್ತಿರುವ, ಕೊಡಗು ಜಿಲ್ಲೆಯ ರೈತ ಮತ್ತು ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಗಳನ್ನು ಜಂಟಿ ಕೃಷಿ ನಿರ್ದೇಶಕರ ಕಚೇರಿ ಮಡಿಕೇರಿ, ವಿಶ್ವವಿದ್ಯಾಲಯದ ವಿಸ್ತರಣಾ ಶಿಕ್ಷಣ ಘಟಕ - ಮಡಿಕೇರಿ ಅಥವಾ ಅರಣ್ಯ ಮಹಾವಿದ್ಯಾಲಯ, ಪೊನ್ನಂಪೇಟೆಯಲ್ಲಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಜಂಟಿ ಕೃಷಿ ನಿರ್ದೇಶಕರ ಕಚೇರಿ ಮಡಿಕೇರಿ, ವಿಸ್ತರಣಾ ಶಿಕ್ಷಣ ಘಟಕ - ಮಡಿಕೇರಿ ಅಥವಾ ಅರಣ್ಯ ಮಹಾವಿದ್ಯಾಲಯ, ಪೊನ್ನಂಪೇಟೆ ಇಲ್ಲಿಗೆ ತಾ. ೨೪ ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಸ್ತರಣಾ ಶಿಕ್ಷಣ ಘಟಕ, ಮಡಿಕೇರಿ ಇಲ್ಲಿಗೆ ಸಂಪರ್ಕಿಸಬಹುದು. ದೂ. ೦೮೨೭೨- ೨೨೫೫೩೯