ಮಡಿಕೇರಿ, ಸೆ. ೧೪: ಕೊಡಗು ಜಿಲ್ಲೆಯಲ್ಲಿ ಹೆಚ್ಚಾಗಿರುವ ಕಾಡಾನೆ ಹಾವಳಿ ತಡೆಗೆ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಮೇಲ್ಮನೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಪ್ರಶ್ನೆಗೆ ಉತ್ತರಿಸಿದರು.

ಕಾಡಾನೆ ಹಾವಳಿ ತಡೆಗೆ ಕೈಗೊಂಡ ಕ್ರಮ ಹಾಗೂ ಅದರ ಅನುಷ್ಠಾನದ ಬಗ್ಗೆ ಸುನಿಲ್ ಸುಬ್ರಮಣಿ ಅಧಿವೇಶನದಲ್ಲಿ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವರು, ಜಿಲ್ಲೆಯಲ್ಲಿ ಆನೆ ಕಂದಕ ನಿರ್ವಹಣೆ, ಸೋಲಾರ್ ತಂತಿ ನಿರ್ಮಾಣ, ಉಪಯೋಗಿತ ರೈಲು ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಾಣ, ವನ್ಯಪ್ರಾಣಿಗಳಿಗೆ ಕುಡಿಯುವ ನೀರಿಗಾಗಿ ಕೆರೆ, ಚೆಕ್‌ಡ್ಯಾಂಗಳ ನಿರ್ಮಾಣ ಹಾಗೂ ಇರುವ ಕೆರೆಗಳ ಕಾಮಗಾರಿ ನಿರ್ವಹಿಸಲಾಗಿದೆ. ತುರ್ತು ನಿರ್ವಹಣೆ ಕ್ಷಿಪ್ರ ಸ್ಪಂದನ ತಂಡಗಳನ್ನು ರಚಿಸಿ ಕಾರ್ಯನಿರ್ವಹಿಸಲಾಗುತ್ತಿದೆ. ಆಯ್ದ ವಲಯಗಳಲ್ಲಿ ಕಾಡಾನೆಗಳನ್ನು ಮರಳಿ ಕಾಡಿಗೆ ಅಟ್ಟಲು ತಂಡ ರಚನೆ ಮಾಡಲಾಗಿದೆ. ವನ್ಯಪ್ರಾಣಿ ದಾಳಿಯಿಂದ ಭಾದಿತ ಗ್ರಾಮಗಳ ಜನರೊಂದಿಗೆ ಸಂಪರ್ಕ ಸಭೆ ನಡೆಸಲಾಗಿದೆ. ೨೦೧೪ ರಿಂದ ಇದುವರೆಗೂ ಉಪಟಳ ನೀಡುತ್ತಿದ್ದ ೧೧ ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರ ಮಾಡಲಾಗಿದೆ. ವೀರಾಜಪೇಟೆ ವಿಭಾಗದಲ್ಲಿ ೯ ಆನೆಗಳಿಗೆ ರೇಡಿಯೋ ಕಾಲರ್‌ಗಳನ್ನು ಅಳವಡಿಸಿ ಅವುಗಳ ಚಲನವಲನಗಳ ಬಗ್ಗೆ ನಿಗಾವಹಿಸಲಾಗಿದೆ. ನಾಗರಹೊಳೆ ವ್ಯಾಪ್ತಿಯಲ್ಲಿ ರಕ್ಷಣಾ ಕೆಲಸಗಳಿಗಾಗಿ ಎಸ್.ಟಿ.ಪಿ.ಎಫ್. ತಂಡ ನೇಮಕ ಮಾಡಲಾಗಿದೆ. ರಕ್ಷಣಾ ಕಾರ್ಯದ ಸಿಬ್ಬಂದಿಗಳಿಗೆ ವೈರ್‌ಲೆಸ್ ವಾಕಿ-ಟಾಕಿ, ಶಸ್ತಾçಸ್ತç, ಆಹಾರ ಸಾಮಾಗ್ರಿಗಳನ್ನು ಒದಗಿಸಿ ಪರಿಣಾಮಕಾರಿಯಾಗಿ ರಕ್ಷಣಾ ಕಾರ್ಯ ಕೈಗೊಳ್ಳಲಾಗಿದೆ. ಮಾನವ-ಪ್ರಾಣಿ ಸಂಘರ್ಷ ತಡೆಯಲು ತಕ್ಷಣ ಕ್ರಮತೆಗೆದುಕೊಳ್ಳಲು ಕೊಡಗು ಮಾನವ-ವನ್ಯಪ್ರಾಣಿ ಸಂಘರ್ಷ ಉಪಶಮನ ಪ್ರತಿಷ್ಠಾನ ವೃತ್ತ ಮಟ್ಟದಲ್ಲಿ ಸ್ಥಾಪನೆ ಮಾಡಲಾಗಿದೆ. ಉಪಯೋಗಿತ ರೈಲ್ವೆ ಹಳಿಗಳನ್ನು ಉಪಯೋಗಿಸಿ ೯.೫೧೬ ಕಿ.ಮೀ ಬ್ಯಾರಿಕೇಡ್ ಕಾಮಗಾರಿ ಕೈಗೊಂಡಿದ್ದು, ಈವರೆಗೂ ೭.೦೭. ಕಿ.ಮೀ ಕಾಮಗಾರಿ ಪೂರ್ಣಗೊಂಡಿದ್ದು, ಇದಕ್ಕಾಗಿ ೫.೬೦ ಕೋಟಿ ವೆಚ್ಚ ಮಾಡಲಾಗಿದೆ. ಬಾಕಿ ಇರುವ ೨.೫ ಕಿ.ಮೀಗೆ ರೈಲ್ವೆ ಕಂಬಗಳನ್ನು ಈಗಾಗಲೇ ಅಳವಡಿಸಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಕಾಡುಹಂದಿಗಳಿAದ ಕೃಷಿ ನಷ್ಟವಾದ ಬಗ್ಗೆ ಕಳೆದ ಮೂರು ವರ್ಷ ಗಳಲ್ಲಿ ಪರಿಹಾರ ಕೋರಿ ಕೃಷಿಕರಿಂದ ಯಾವುದೇ ಅರ್ಜಿ ಸ್ವೀಕೃತವಾಗಿಲ್ಲ. ಇದಲ್ಲದೆ ಕಾಡು ಹಂದಿಗಳನ್ನು ಕೊಲ್ಲಲು ಆದೇಶ ನೀಡುವ ಅಧಿಕಾರವನ್ನು ಸಂಬAಧಿಸಿದ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ನೀಡಲು ನಿರ್ದೇಶಿಸಲಾಗಿದೆ ಎಂದು ವಿವರಿಸಿದರು.

ಕೊಡಗು ಜಾನಪದ ಲೋಕ ನಿರ್ಮಾಣಕ್ಕೆ ಯಾವುದೇ ಪ್ರಸ್ತಾವನೆ ಸ್ವೀಕಾರವಾಗಿಲ್ಲ, ಪ್ರಸ್ತಾವನೆ ಬಂದಲ್ಲಿ ಪರಿಶೀಲಿಸಲಾಗುವುದು ಎಂದು ಸುನಿಲ್ ಸುಬ್ರಮಣಿ ಪ್ರಶ್ನೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಉತ್ತರಿಸಿದ್ದಾರೆ.