ಮಡಿಕೇರಿ, ಸೆ. ೧೪: ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ವತಿಯಿಂದ ಡಾ. ಜೆ. ಸೋಮಣ್ಣ ಅವರು ಬರೆದಿರುವ ನಾಲ್ಕು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ತಾ. ೨೨ ರಂದು ಮಧ್ಯಾಹ್ನ ೨.೩೦ ಗಂಟೆಗೆ ಪತ್ರಿಕಾಭವನ ಸಭಾಂಗಣದಲ್ಲಿ ನಡೆಯಲಿದೆ.

ಮೌನ ಕಣಿವೆಯ ಸಂತ ಕೃತಿಯನ್ನು ಮಾಜಿ ಸಚಿವ ಯಂ.ಸಿ. ನಾಣಯ್ಯ, ಅಶ್ವತ್ಥರ ಕಥಾ ಸಾಹಿತ್ಯವನ್ನು ಹಿರಿಯ ಸಾಹಿತಿ ಪ್ರೊ. ಕಾಳೇಗೌಡ ನಾಗವಾರ, ಗಿರಿಸೀಮೆಯ ಹಾಡು ಪಾಡು ಕೃತಿಯನ್ನು ಕ.ಸಾ.ಪ. ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಕನ್ನಡ ಸಾಹಿತ್ಯಕ್ಕೆ ಕೊಡಗಿನ ಕೊಡುಗೆ ಕೃತಿಯನ್ನು ವಕೀಲ ಕೆ.ಆರ್. ವಿದ್ಯಾಧರ ಬಿಡುಗಡೆ ಮಾಡುವರು. ಬಳಗದ ಅಧ್ಯಕ್ಷ ಎಂ.ಪಿ. ಕೇಶವಕಾಮತ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಸ್‌ಎನ್‌ಡಿಪಿ ಕೊಡಗು ಯೂನಿಯನ್ ಅಧ್ಯಕ್ಷ ವಿ.ಕೆ. ಲೋಕೇಶ್ ಆಗಮಿಸಲಿದ್ದು, ಕೃತಿಕಾರ ಡಾ. ಜೆ. ಸೋಮಣ್ಣ ಉಪಸ್ಥಿತರಿರುವರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ಆಯ್ದ ಗಾಯಕರಿಂದ ಭಾವಗೀತೆ ಗಾಯನ ಏರ್ಪಡಿಸಲಾಗಿದೆ ಎಂದು ಬಳಗದ ಕಾರ್ಯದರ್ಶಿ ವಿಲ್ಫೆçಡ್ ಕ್ರಾಸ್ತ ತಿಳಿಸಿದ್ದಾರೆ.