ಸೋಮವಾರಪೇಟೆ, ಸೆ. ೧೫: ಗ್ರಾಮ ಪಂಚಾಯಿತಿ ನೌಕರರ ಕನಿಷ್ಟ ವೇತನಕ್ಕೆ ಬೇಕಾಗುವ ಅನುದಾನ, ಬಡ್ತಿ, ಪಿಂಚಣಿ, ಕೊರೊನಾ ವಿಮೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ಶಾಸಕ ಅಪ್ಪಚ್ಚು ರಂಜನ್ ಅವರಿಗೆ ಮನವಿ ಸಲ್ಲಿಸಿತು.
ಬೇಡಿಕೆಗಳ ಈಡೇರಿಕೆಗಾಗಿ ಸಂಬAಧಿಸಿದ ಇಲಾಖಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳಲ್ಲಿ ಮನವಿ ಮಾಡಲಾಗಿತ್ತು. ಒಂದು ತಿಂಗಳ ಒಳಗಾಗಿ ಸಮಸ್ಯೆ ಬಗೆಹರಿಸುವ ಭರವಸೆಯನ್ನು ಸಚಿವ ಈಶ್ವರಪ್ಪ ನೀಡಿದ್ದರು. ಆದರೆ ಇಂದಿಗೂ ಸಭೆ ನಡೆಸಿ ನಮ್ಮ ಸಮಸ್ಯೆ ಬಗೆಹರಿಸಿಲ್ಲ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಿದ್ದು, ತಾಲೂಕಿನಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ತೆರಳಿ ಮುಷ್ಕರದಲ್ಲಿ ಪಾಲ್ಗೊಳ್ಳುವುದಾಗಿ ತಾಲೂಕು ಘಟಕದ ಅಧ್ಯಕ್ಷ ಹೆಚ್.ಜಿ. ನವೀನ್ ತಿಳಿಸಿದ್ದಾರೆ. ಮನವಿ ಸಲ್ಲಿಸುವ ಸಂದರ್ಭ ಪದಾಧಿಕಾರಿಗಳಾದ ಮೂರ್ತಿ, ಆನಂದ, ವಿಶ್ವರೂಪ ಮತ್ತಿತರರು ಇದ್ದರು.