ಮಡಿಕೇರಿ, ಸೆ. ೧೫: ಮಾಜಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡೀಸ್ ಅವರ ಬದುಕು ಕಾಂಗ್ರೆಸ್ ಕಾರ್ಯಕರ್ತರಿಗೆ ಅಧ್ಯಯನವಾಗಲಿ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ತೀತಿರ ಧರ್ಮಜಾ ಉತ್ತಪ್ಪ ಸಲಹೆ ನೀಡಿದ್ದಾರೆ.

ಕೊಡಗು ಜಿಲ್ಲಾ ಕಾಂಗ್ರೆಸ್ ಆಸ್ಕರ್ ಫರ್ನಾಂಡೀಸ್ ನಿಧನ ಹಿನ್ನೆಲೆ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಸ್ಕರ್ ಅವರ ಸರಳತೆ ಮತ್ತು ಸಜ್ಜನಿಕೆ ಎಲ್ಲಾ ನಾಯಕರಿಗೂ ಮಾದರಿಯಾಗಿದೆ ಎಂದು ಹೇಳಿದರು

ಹಿರಿಯ ಮುಖಂಡ ಟಿ.ಪಿ. ರಮೇಶ್ ಅವರು ಮಾತನಾಡಿ, ದೇಶ ಕಂಡ ಹಿರಿಯ ರಾಜಕೀಯ ಮುತ್ಸದಿ ಆಸ್ಕರ್ ಫರ್ನಾಂಡೀಸ್ ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ವಿವರಿಸಿದರು.

ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯಾ ಅಬ್ರಾರ್, ನಗರಸಭಾ ಮಾಜಿ ಸದಸ್ಯ ಬೇಬಿ ಮ್ಯಾಥ್ಯೂ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ ಮಾತನಾಡಿದರು.

ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕ ಹೆಚ್.ಎಂ. ನಂದಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಎಂ.ಎ. ಉಸ್ಮಾನ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ವೃತ್ತಿಪರ ಘಟಕದ ಜಿಲ್ಲಾಧ್ಯಕ್ಷ ಅಂಬೇಕಲ್ ನವೀನ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹೊಸೂರು ಸೂರಜ್, ಮಾಜಿ ಮೂಡ ಅಧ್ಯಕ್ಷ ಚುಮ್ಮಿ ದೇವಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಾನಂಡ ಪ್ರಥ್ಯು, ಹೆಚ್.ಎಂ. ಕಾವೇರಿ, ಪ್ರಮುಖರಾದ ಪ್ರಕಾಶ್ ಆಚಾರ್ಯ, ಪೀಟರ್, ಫ್ಯಾನ್ಸಿ ಪಾರ್ವತಿ, ಮಮ್ತಾಜ್ ಬೇಗಂ, ಕಲೀಲ್ ಬಾಷ, ಜಿ.ಸಿ. ಜಗದೀಶ್, ಶೇಖ್ ರವೂಫ್, ಉದಯ್ ಕುಮಾರ್, ಬೊಳ್ಳಿಯಂಡ ಗಣೇಶ್, ಇಸ್ಮಾಯಿಲ್, ಜಯಲಕ್ಷ್ಮಿ, ಸುನೀಲ್ ಪತ್ರಾವೋ, ಕೆ.ಎಂ. ಬಷೀರ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.