ನಾಪೋಕ್ಲು, ಸೆ. ೧೫: ಕಕ್ಕಬ್ಬೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ರಾಗಿ ಬಡಕಡ ಸುರೇಶ್ ಬೆಳ್ಯಪ್ಪ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. ಹಿಂದೆ ಉಪಾಧ್ಯಕ್ಷರಾಗಿದ್ದ ಅಲ್ಲಾರಂಡ ಸನ್ನು ಅಯ್ಯಪ್ಪ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಈ ಸ್ಥಾನಕ್ಕೆ ಆಯ್ಕೆ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕಲ್ಯಾಟಂಡ ರಘು ತಮ್ಮಯ್ಯ, ಎಲ್ಲಾ ನಿರ್ದೇಶಕರು ಹಾಜರಿದ್ದರು.