ಮಡಿಕೇರಿ, ಸೆ. ೧೪: ಪ್ರಸ್ತುತ ಹಲವು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೨ ಕ್ಕಿಂತ ಕಡಿಮೆ ದಾಖಲಾಗಿರುವ ಕಾರಣ ತಾ.೧೭ ರಿಂದ ೯, ೧೦ ನೇ ತರಗತಿಗಳು, ಪದವಿಪೂರ್ವ ಕಾಲೇಜುಗಳು, ಎಲ್ಲಾ ಪದವಿ, ತಾಂತ್ರಿಕ ಹಾಗೂ ಡಿಪ್ಲೊಮಾ ಕಾಲೇಜುಗಳ ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಪ್ರಾರಂಭಿಸುವAತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಶಾಲಾ-ಕಾಲೇಜುಗಳು ಸಂಬAಧಪಟ್ಟ ಇಲಾಖೆಗಳ ಸುತ್ತೋಲೆಯಂತೆ ಪ್ರಮಾಣಿತ ಕಾರ್ಯಾಚರಣಾ ವಿಧಾನ (SಔP) ಪಾಲಿಸಿ ಕಾರ್ಯಾರಂಭಗೊಳ್ಳಬೇಕಾಗಿ ತಿಳಿಸಿದ್ದಾರೆ.

ಕೆಳಕಂಡ ಮಾರ್ಗಸೂಚಿಗಳನ್ನು ಪಾಲಿಸಿ ಶಾಲಾ-ಕಾಲೇಜುಗಳ ಪುನರಾರಂಭಕ್ಕೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಲಾ ಕಾಲೇಜು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಮಾಣಿತ ಕಾರ್ಯಾಚರಣಾ ವಿಧಾನದಂತೆ ನಿಯಮಾನುಸಾರ ಸೂಕ್ತ ಕೆ.ಎಸ್.ಆರ್.ಟಿ.ಸಿ. / ಖಾಸಗಿ ಸಾರಿಗೆ ವ್ಯವಸ್ಥೆ ಬಗ್ಗೆ ಕ್ರಮವಹಿಸಬೇಕು. ಶಾಲಾ ಕಾಲೇಜು, ವಿದ್ಯಾ ಸಂಸ್ಥೆ ಮತ್ತು ಹಾಸ್ಟೆಲ್‌ಗಳನ್ನು ನಿಯಮಾನುಸಾರ ಸ್ಯಾನಿಟೈಸ್ ಮಾಡುವಂತೆ ಕ್ರಮ ವಹಿಸಬೇಕು. ಹಿಂದುಳಿದ, ಅಲ್ಪ ಸಂಖ್ಯಾತರ, ಸಮಾಜ ಕಲ್ಯಾಣ ಇತ್ಯಾದಿ ಇಲಾಖೆಗಳ ಹಾಸ್ಟೆಲ್ಗಳ ಅಧಿಕಾರಿ / ಸಿಬ್ಬಂದಿಗಳು ಕನಿಷ್ಟ ೧ ಡೋಸ್ ಕೋವಿಡ್-೧೯ ನಿರೋಧಕ ಲಸಿಕೆ ಪಡೆದಿರಬೇಕು. ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕನಿಷ್ಟ ೧ ಕೋವಿಡ್-೧೯ ನಿರೋಧಕ ಲಸಿಕೆ ಪಡೆದಿರಬೇಕು. ಪದವಿ ಮತ್ತು ಅದಕ್ಕೆ ಮೇಲ್ಪಟ್ಟ ವಿದ್ಯಾರ್ಥಿಗಳು ಕಡ್ಡಾಯವಾಗಿ ಕನಿಷ್ಟ ೧ ಕೋವಿಡ್-೧೯ ನಿರೋಧಕ ಲಸಿಕೆ ಪಡೆದಿರಬೇಕು. ವಿದ್ಯಾರ್ಥಿಗಳ ಪಾಲಕರು ಕೋವಿಡ್-೧೯ ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಪ್ರತಿ ಶಿಕ್ಷಣ ಸಂಸ್ಥೆಯಲ್ಲಿ / ಹಾಸ್ಟೆಲ್‌ಗಳಲ್ಲಿ ಒಂದು ಕೊಠಡಿಯನ್ನು ಐಸೋಲೋಷನ್ ಕೊಠಡಿ ಆಗಿ ಕಾಯ್ದಿರಿಸಬೇಕು.

ಈ ಆದೇಶವು ಕರ್ನಾಟಕ ಸರ್ಕಾರವು ಕಾಲಕಾಲಕ್ಕೆ ನೀಡುವ ನಿರ್ದೇಶನಗಳಿಗೆ ಒಳಪಟ್ಟಿರುತ್ತದೆ. ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಬದಲಾವಣೆಗಳನ್ನು ಜಿಲ್ಲಾಡಳಿತ

(ಮೊದಲ ಪುಟದಿಂದ) ಮುಂದಿನ ದಿನಗಳಲ್ಲಿ ನೀಡಲಿದೆ. ಈ ಆದೇಶದ ದುರುಪಯೋಗ ಅಥವಾ ಉಲ್ಲಂಘನೆಯು ಭಾರತ ದಂಡ ಸಂಹಿತೆ ಕಲಂ ೧೮೬೦, ದಿ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಕ್ಟ್ ೨೦೨೦, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆ್ಯಕ್ಟ್ ೨೦೦೫ರಡಿ ಮತ್ತು ಸಂಬAಧಪಟ್ಟ ವಿವಿಧ ಕಾಯ್ದೆಗಳಡಿ ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹ

ಶಾಲಾ ಕಾಲೇಜು ಅರಂಭಕ್ಕೂ ಮುನ್ನ ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಮಡಿಕೇರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಘಟಕದ ವ್ಯವಸ್ಥಾಪಕರು ಮತ್ತು ಜಿಲ್ಲಾಡಳಿತ ಬಸ್ ಸಂಚಾರ ಪುನರ್ ಆರಂಭಿಸಲು ಮುಂದಾಗಲಿ. ಕಾರ್ಮಾಡು , ನಿಟ್ಟೂರು, ಬಾಳೆಲೆ, ಪೊನ್ನಪ್ಪಸಂತೆ, ಕಿರುಗೂರು ಮಾಯಮೂಡಿ ಭಾಗಗಳಲ್ಲಿ ಬೆಳಿಗ್ಗೆ ಮತ್ತು ಸಂಜೆ ಸಂಚರಿಸುತ್ತಿದ್ದ ಸರ್ಕಾರಿ ಬಸ್ಸುಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದೆ. ತಾ. ೧೭ ರಿಂದ ಶಾಲಾ-ಕಾಲೇಜುಗಳು ಆರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳಿಗೆ ಗ್ರಾಮಾಂತರ ಪ್ರದೇಶಗಳಿಂದ ಹೋಗಿ ಬರಲು ಸಾರಿಗೆ ವ್ಯವಸ್ಥೆ ಅತ್ಯಗತ್ಯವಾಗಿದೆ. ಸ್ಥಗಿತಗೊಂಡ ರಸ್ತೆ ಸಾರಿಗೆ ನಿಗಮದ ಎಲ್ಲಾ ಬಸ್ಸುಗಳನ್ನು ವಾರದ ಎಲ್ಲಾ ದಿನಗಳಂದು ಸಂಚರಿಸುವAತೆ ಜಿಲ್ಲಾಡಳಿತ ಹಾಗೂ ಸಾರಿಗೆ ಘಟಕದ ವ್ಯವಸ್ಥಾಪಕರು ಕ್ರಮ ಕೈಗೊಳ್ಳುವಂತೆ ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಕ್ಕೇರ ಅಯ್ಯಪ್ಪ, ಉಪಾಧ್ಯಕ್ಷೆ ಕವಿತಾ, ಸದಸ್ಯರಾದ ಕಾಟಿಮಾಡ ಶರೀನ್ ಮುತ್ತಣ್ಣ, ಅಮ್ಮುಣಿ ಆಗ್ರಹಿಸಿದ್ದಾರೆ.