ಸೋಮವಾರಪೇಟೆ,ಸೆ.೧೫: ಇಲ್ಲಿನ ಸೃಷ್ಟಿಯ ಚಿಗುರು ಕವಿ ಬಳಗ ಹಾಗೂ ದೇವಿ ಪ್ರಜ್ವಲ್ ಆಶ್ರಯದಲ್ಲಿ, ಶಿಕ್ಷಕರ ದಿನಾಚರಣೆ ಅಂಗವಾಗಿ ತಾ. ೨೫ರಂದು ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಳಗದ ಅಧ್ಯಕ್ಷ ಕೆ.ಪಿ. ಸುದರ್ಶನ್ ತಿಳಿಸಿದ್ದಾರೆ.
ಇಲ್ಲಿನ ಮಹಿಳಾ ಸಮಾಜ ಸಭಾಂಗಣದಲ್ಲಿ ತಾ. ೨೫ರಂದು ಬೆಳಿಗ್ಗೆ ೯.೩೦ಕ್ಕೆ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು, ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಲಿಚ್ಚಿಸುವ ತಾಲೂಕು ವ್ಯಾಪ್ತಿಯ ಕವಿಗಳು ತಾ. ೨೦ರ ಒಳಗೆ ಮೊ:೯೯೦೦೫೯೫೭೬೧, ೮೯೭೦೦೭೫೫೯೪ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದ್ದಾರೆ.