ಕರಿಕೆ,ಸೆ.೧೫ : ರಾಜ್ಯ ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ ವೀರಾಜಪೇಟೆ ಶಾಸಕ ಕರ್ನಾಟಕ ರಾಜ್ಯ ಸರಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ.ಬೋಪಯ್ಯ ವಿಧಾನಸೌಧದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಕೊಡಗಿನ ಸಮಸ್ಯೆ ಬಗ್ಗೆ ಗಮನ ಸೆಳೆದರು.
ಅಲ್ಲದೆ ಪಶ್ಚಿಮ ಘಟ್ಟಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸುವಂತೆ, ಪಶ್ಚಿಮ ಘಟ್ಟಗಳ ತಪ್ಪಲಿನ ಆದಿವಾಸಿಗಳಿಗೆ ಸೂಕ್ತ ಮೂಲಭೂತ ಸೌಕರ್ಯ ಸೇರಿದಂತೆ ಪಶ್ಚಿಮ ಘಟ್ಟಗಳ ಕಾರ್ಯಪಡೆ ರಾಜ್ಯ ಸಮಿತಿಗೆ ವಿವಿಧ ಜಿಲ್ಲೆಯ ಅರ್ಹ ಸದಸ್ಯರನ್ನು ನೇಮಿಸಲು ಕ್ರಮ ವಹಿಸುವಂತೆ ಮನವಿ ಮಾಡಿದರು.