ಮಡಿಕೇರಿ, ಸೆ. ೧೫: ಪ್ರಸಕ್ತ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ-ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ ಮಹಿಳಾ ಅಭಿವೃದ್ಧಿ ನಿಗಮದ ಸಹಾಯಧನದೊಂದಿಗೆ ಬ್ಯಾಂಕ್ ಸಾಲ ಸೌಲಭ್ಯ ನೀಡಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ರಾಷ್ಟಿçÃಕೃತ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳ (ಹಂದಿ ಸಾಕಾಣಿಕೆ, ಆಡು ಸಾಕಾಣಿಕೆ, ಕೋಳಿ ಸಾಕಾಣಿಕೆ, ನರ್ಸರಿ, ಬ್ಯೂಟಿ ಪಾರ್ಲರ್, ಟೈಲರಿಂಗ್, ವ್ಯಾಪಾರ ಇತ್ಯಾದಿಗಳಿಗೆ) ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ವಾರ್ಷಿಕ ಆದಾಯ ರೂ. ೧,೫೦,೦೦೦ಕ್ಕೆ ಮೀರಿರಬಾರದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಕುಟುಂಬದ ವಾರ್ಷಿಕ ಆದಾಯ ರೂ. ಎರಡು ಲಕ್ಷಕ್ಕೆ ಮೀರಿರಬಾರದು. ಹಾಗೆಯೇ ೧೮ ರಿಂದ ೫೫ ವರ್ಷ ವಯೋಮಿತಿಗೊಳಪಟ್ಟ ಅರ್ಹ ಮಹಿಳೆಯರಿಗೆ (ವಿಧವೆಯರು, ಸಂಕಷ್ಟಕ್ಕೊಳಗಾದ, ವಿಶೇಷಚೇತನ ಮಹಿಳೆಯರು ಹಾಗೂ ದೇವದಾಸಿ ಮಹಿಳೆಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು) ಅವಕಾಶವಿರುತ್ತದೆ.

ಅರ್ಜಿ ಪಡೆಯಲು ತಾ. ೨೪ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿಯ ದೂ. ೦೮೨೭೬-೨೮೨೨೮೧ ನ್ನು ಹಾಗೂ ಅರ್ಜಿ ಫಾರಂಗೆ ಹಾಗೂ ಇತರೆ ವಿವರಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೋಮವಾರಪೇಟೆ ಇವರನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.

ಶಿಶಿಕ್ಷÄ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗ ಶಿಶಿಕ್ಷÄ ಅಧಿನಿಯಮ ೧೯೬೧ ರನ್ವಯ ಪೂರ್ಣ ಅವಧಿಯ ತಾಂತ್ರಿಕ ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದಿಂದ ಶಿಶಿಕ್ಷÄ ವೃತ್ತಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳ ವಿವರ: ಪಾಸಾ ೩೦ ಸ್ಥಾನಗಳು, ಎಲೆಕ್ಟಿçÃಷಿಯನ್ ೨೪ ಸ್ಥಾನಗಳು, ಫಿಟ್ಟರ್ ೭ ಸ್ಥಾನಗಳು, ಮೆಕ್ಯಾನಿಕ್ ಡೀಸೆಲ್ ೮೦ ಸ್ಥಾನಗಳು, ಎಂ.ವಿ.ಬಿ.ಬಿ. ೪ ಸ್ಥಾನಗಳು, ವೆಲ್ಡರ್ ೦೮ ಸ್ಥಾನಗಳು, ಮೆಕ್ಯಾನಿಕ್ ಆಟೊ ಇಲೆಕ್ಟಿçಕಲ್ ಮತ್ತು ಇಲೆಕ್ಟಾçನಿಕ್ಸ್ ೧೬ ಸ್ಥಾನಗಳು, ಮೋಟಾರ್ ಮೆಕ್ಯಾನಿಕ್ ವೆಹಿಕಲ್ ೨೦ ಸ್ಥಾನಗಳು, ಮೆಕ್ಯಾನಿಕ್ ಆಟೊ ಮೊಬೈಲ್ (ಅಡ್ವಾನ್ಸ್ಡ್ ಡೀಸೆಲ್ ಎಂಜಿನ್) ೧ ಸ್ಥಾನಗಳು ಖಾಲಿ ಇದೆ. ಅಭ್ಯರ್ಥಿಗಳಿಗೆ ತರಬೇತಿಯು ಒಂದು ವರ್ಷದ್ದಾಗಿದೆ.

ಷರತ್ತು ನಿಬಂಧನೆಗಳು: ಅರ್ಜಿಗಳನ್ನು ಆಯೋಗದ ಅಂತರ್ಜಾಲ ತಿತಿತಿ.ಚಿಠಿಠಿಡಿeಟಿಣiಛಿeshiಠಿiಟಿಜiಚಿ.oಡಿg.ನಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡುವುದು ಹಾಗೂ ನೋಂದಣಿ ಪ್ರತಿಯನ್ನು ಸಲ್ಲಿಸುವುದು. (ನೋಂದಣಿ ಪ್ರತಿ ಸಲ್ಲಿಸದೇ ತರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು). ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಿತಿತಿ.ಚಿಠಿಠಿಡಿeಟಿಣiಛಿeshiಠಿiಟಿಜiಚಿ.oಡಿg ನ ಹೋಂ ಪೇಜ್‌ನಲ್ಲಿ ಖegisಣಡಿಚಿಣioಟಿ-ಛಿಚಿಟಿಜiಜಚಿಣe ಖegisಣಡಿಚಿಣioಟಿ ನಲ್ಲಿ ವಿವರಗಳನ್ನು ಕಡ್ಡಾಯವಾಗಿ ನಮೂದಿಸುವುದು ನಂತರ ಇ-ಮೇಲ್ ನಲ್ಲಿ ಆಕ್ಟಿವೇಷನ್ (ಚಿಛಿಣivಚಿಣioಟಿ) ಮಾಡಿದ ನಂತರ ಇ-ಮೇಲ್ ಯೂಸರ್ ಐಡಿ ಮತ್ತು ಇ-ಮೇಲ್ ಪಾಸ್‌ವರ್ಡ್- ಲಾಗಿನ್ ಪಾಸ್‌ವರ್ಡ್ ಆಗಿರುತ್ತದೆ.

ಲಾಗಿನ್ ಆದ ನಂತರ ಛಿಚಿಟಿಜiಜಚಿಣe ಜಚಿshboಚಿಡಿಜ ನಲ್ಲಿ ವಿವರಗಳನ್ನು ನಮೂದಿಸುವುದು. ಪೂರ್ಣ ವಿವರಗಳನ್ನು ನಮೂದಿಸಿ, ಸಂಬAಧಿಸಿದ ದಾಖಲಾತಿಗಳನ್ನು ಅಪ್‌ಡೇಟ್ ಮಾಡಿರುವ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. ಅಪೂರ್ಣ ವಿವರಗಳುಳ್ಳ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು.

ಶಿಶಿಕ್ಷÄಗಳು ಆನ್‌ಲೈನ್ ನೋಂದಣಿಗೆ ಆಧಾರ್ ಕಾರ್ಡ್ ಹಾಗೂ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ವಿವರಗಳು (ಹೆಸರು, ಹುಟ್ಟಿದ ದಿನಾಂಕ, ಪೋಷಕರ ಹೆಸರು) ಒಂದಕ್ಕೊAದು ತಾಳೆಯಾಗುವಂತಿರಬೇಕು. ಇಲ್ಲವಾದಲ್ಲಿ ಆನ್‌ಲೈನ್ ನೋಂದಣಿಯಲ್ಲಿ ಅಡಚಣೆ ಉಂಟಾದರೆ ಸಂಸ್ಥೆ ಯಾವುದೇ ರೀತಿಯ ಹೊಣೆಗಾರಿಕೆ ಹೊಂದುವುದಿಲ್ಲ. ಶಿಶಿಕ್ಷÄಗಳು ಕಾಯಿದೆ ೧೯೬೧ ರನ್ವಯ ಈಗಾಗಲೇ ಶಿಶಿಕ್ಷÄ ತರಬೇತಿ ಪಡೆದಿರುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ. ಒಂದು ವೇಳೆ ಅಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಪೊಲೀಸ್ ಮೊಕದ್ದಮೆ ದಾಖಲಿಸಬಹುದು.

ಅರ್ಜಿ ಸಲ್ಲಿಸಲು ತಾ. ೨೦ ಕೊನೆಯ ದಿನವಾಗಿದೆ. ಪರಿಶಿಷ್ಟ ಜಾತಿಯವರಿಗೆ ೧:೮ ಮೀಸಲಾತಿ, ಪರಿಶಿಷ್ಟ ಪಂಗಡಕ್ಕೆ ೧:೨೦, ಅಂಗವಿಕಲರಿಗೆ ೩ ಮತ್ತು ಮಾಜಿ ಸೈನಿಕ ಮಕ್ಕಳಿಗೆ ಪ್ರತಿಶತ ೩ ನೀಡಲಾಗುವುದು, ವಯೋಮಿತಿಯು ೨೦೨೧ ರ ಸೆಪ್ಟೆಂಬರ್, ೧೩ ಕ್ಕೆ ೧೮ ವರ್ಷ ತುಂಬಿರಬೇಕು ಹಾಗೂ ೨೬ ವರ್ಷಗಳಿಗಿಂತ ಕಡಿಮೆ ಇರಬೇಕು. ಈಗಾಗಲೇ ಶಿಶಿಕ್ಷÄ ತರಬೇತಿ ಪಡೆದಿರುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕಚೇರಿಯಿಂದ ನೀಡುವ ಅರ್ಜಿಯನ್ನು ಭರ್ತಿಗೊಳಿಸಿ ದಾಖಲಾತಿಗಳಾದ ಆಧಾರ್ ಕಾರ್ಡ್ ಪ್ರತಿ-೨, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ-೨, ಆಧಾರ್ ನಂಬರ್ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಬಗ್ಗೆ ಸಂಬAಧಿಸಿದ ಬ್ಯಾಂಕ್‌ನಿAದ ದೃಢೀಕರಣ ಪತ್ರ, ಇ-ಮೇಲ್ ಐಡಿ, ವಿದ್ಯಾರ್ಹತೆಯ ಮೂಲ ದಾಖಲಾತಿ ಮತ್ತು ಜೆರಾಕ್ಸ್ ಪ್ರತಿ ಮತ್ತು ಜಾತಿ ಪ್ರಮಾಣದ ಮೂಲ ಪ್ರತಿ ಮತ್ತು ಜೆರಾಕ್ಸ್ ಪ್ರತಿಯೊಂದಿಗೆ ವಿಭಾಗೀಯ ನಿಯಂತ್ರಣಾಧಿಕಾರಿ, ಕ.ರಾ.ರ.ಸಾ. ನಿಗಮ, ವಿಭಾಗೀಯ ಕಚೇರಿ, ಪುತ್ತೂರು ವಿಭಾಗ, ಮುಕ್ರಂಪಾಡಿ, ದರ್ಬೆ ಅಂಚೆ, ಪುತ್ತೂರು, ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿ ನೇರ ಸಂದರ್ಶನಕ್ಕೆ ತಾ. ೨೨ ರಂದು ಹಾಜರಾಗುವಂತೆ ಪುತ್ತೂರು ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.