ಆಲೂರು-ಸಿದ್ದಾಪುರ, ಸೆ. ೧೬: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜ ಸಂಯುಕ್ತ ಆಶ್ರಯದಲ್ಲಿ ತಾ. ೨೦ ರಿಂದ ೨೩ ರವರೆಗೆ ಸಂಗಯ್ಯನಪುರದ ಅರೆಭಾಷೆ ಗೌಡ ಸಮಾಜದಲ್ಲಿ ಅರೆಭಾಷೆ ಸಂಸ್ಕೃತಿ ಶಿಬಿರ ಆಯೋಜಿಸಲಾಗಿದೆ ಎಂದು ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ದೇವಾಯಿರ ಗಿರೀಶ್, ಕಾರ್ಯದರ್ಶಿ ಕುಯುಮುಡಿ ಜಯಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದರು.
ಸಂಗಯ್ಯನಪುರದಲ್ಲಿ ಅರೆಭಾಷೆ ಸಂಸ್ಕೃತಿ ಶಿಬಿರವನ್ನು ಆಯೋಜನೆ ಮಾಡಲಾಗಿದ್ದು, ತಾ. ೨೦ ರಂದು ಬೆಳಿಗ್ಗೆ ೧೦ ಗಂಟೆಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಶಿಬಿರವನ್ನು ಬೆಂಗಳೂರಿನ ಬಾಗಲೂರು ಸರಕಾರಿ ಪ.ಪೂ. ಕಾಲೇಜು ಪ್ರಾಂಶುಪಾಲ ನಂಗಾರು ನಿಂಗರಾಜ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ತಾ.ಪಂ. ಮಾಜಿ ಸದಸ್ಯೆ ಭಟ್ಯನ ಸವಿತ ಈರಪ್ಪ, ಪತ್ರಕರ್ತ ಸುರೇಶ್ ಚೆರಿಯಮನೆ, ನಿವೃತ್ತ ಅಂಚೆ ಅಧೀಕ್ಷಕ ಕಡ್ಯದ ಮಾಚಯ್ಯ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ತಾ. ೨೩ ರಂದು ಸಮಾರೋಪ ಸಮಾರಂಭ ನಡೆಯಲಿದೆ.