ಸೋಮವಾರಪೇಟೆ, ಸೆ. ೧೬: ಮಾಜಿ ಸಚಿವ, ಕಾಂಗ್ರೆಸ್ ಮುಖಂಡರಾಗಿದ್ದ ಆಸ್ಕರ್ ಫರ್ನಾಂಡಿಸ್ ಅವರ ನಿಧನಕ್ಕೆ ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಸಭೆ ಸೇರಿ ಸಂತಾಪ ಸೂಚಿಸಿದರು.

ಈ ಸಂದರ್ಭ ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ನಾಗರಾಜು, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಹೆಚ್. ಮಂಜುನಾಥ್, ಕಚೇರಿ ಕಾರ್ಯದರ್ಶಿ ಹೆಚ್.ಜಿ. ರಘು, ಹೆಚ್.ವಿ. ರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.