ಮಡಿಕೇರಿ, ಸೆ. ೧೬: ಮಂಗಳೂರು ವಿಶ್ವವಿದ್ಯಾನಿಲಯ ತಾ. ೩೦ ರಿಂದ ಪದವಿ ಮಟ್ಟದ ಅಂತಿಮ ಸೆಮಿಸ್ಟರ್ನ ಪರೀಕ್ಷೆಗಳನ್ನು ಸರಕಾರ ಸೂಚಿಸಿರುವ ಕೋವಿಡ್ ನಿಯಮಗಳ ಪಾಲನೆಯೊಂದಿಗೆ ನಡೆಸಲು ನಿರ್ಧರಿಸಲಾಗಿದೆ.
ತಾ. ೨೭ ರಿಂದ ೧, ೩, ೫ ಮತ್ತು ೭ನೇ ಸೆಮಿಸ್ಟರ್ಗೆ ನಡೆದಿರುವ ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಪ್ರಾರಂಭಿಸಲಾಗುವುದು, ಹಿಂಬಾಕಿ ಇರುವ ವಿದ್ಯಾರ್ಥಿಗಳಿಗೆ, ಕೋವಿಡ್ ಬಾಧಿತರಿಗೆ - ಪ್ರಯಾಣದ ತೊಂದರೆ ಉಂಟಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆಯ ಪ್ರಕಟಣೆಯನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.