ಭಾಗಮಂಡಲ, ಸೆ. ೧೫: ಪುಣ್ಯಕ್ಷೇತ್ರ ಭಾಗಮಂಡಲದಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು, ಮಳೆಗಾಲ ಪ್ರಾರಂಭವಾಗಿನಿAದ ಕಾಮಗಾರಿಗಳು ಸ್ಥಗಿತಗೊಂಡಿವೆ. ಭಾಗಮಂಡಲ ಪಟ್ಟಣದ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳಿದ್ದು ವಾಹನ ಸಂಚಾರ ದುಸ್ತರವಾಗಿದೆ. ರಸ್ತೆಗುಂಡಿಗಳನ್ನು ಎರಡು-ಮೂರು ದಿನಗಳ ಒಳ ಗಾಗಿ ಮುಚ್ಚಿ ದುರಸ್ತಿಪಡಿಸದಿದ್ದಲ್ಲಿ ಮುಂದಿನ ತಾ. ೨೦ ರಂದು ಬೆಳಿಗ್ಗೆ ೯ ಗಂಟೆಯಿAದ ಕರಿಕೆ ಜಂಕ್ಷನ್ ಬಳಿ ಹಾಗೂ ಭಾಗಮಂಡಲ ನಾಪೋಕ್ಲು ಜಂಕ್ಷನ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಗುವುದು ಎಂದು ಇಲ್ಲಿನ ಕಾವೇರಿ ಆಟೋ ಮಾಲೀಕರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಭಾಗಮಂಡಲ ಪಟ್ಟಣದ ಹೃದಯ ಭಾಗದಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು ಹಲವು ದಿನಗಳಿಂದ ಕೆಲಸ ಸ್ಥಗಿತಗೊಂಡಿದೆ. ಪಟ್ಟಣ ವ್ಯಾಪ್ತಿಯಲ್ಲಿ ವಾಹನ ಸಂಚಾರ ದುಸ್ತರವಾಗಿದೆ. ರಸ್ತೆ ಪೂರ್ತಿ ಗುಂಡಿಗಳಿದ್ದು, ಕೆಸರುಮಯವಾಗಿದೆ.

ಸಾರ್ವಜನಿಕರು ನಡೆದಾಡಲು ಪರದಾಡುವಂತಾಗಿದೆ. ರಸ್ತೆ ದುರಸ್ತಿ ಪಡಿಸುವಂತೆ ಸಂಬAಧಪಟ್ಟವರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನ ದೊರೆತಿಲ್ಲ. ರಸ್ತೆಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳದಿದ್ದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಆಟೋ ಮಾಲೀಕರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

-ಸುನಿಲ್