ಇಂಧನ ವಲಯ ಖಾಸಗೀಕರಣವಿಲ್ಲ

ಬೆಂಗಳೂರು, ಸೆ. ೧೬: ರಾಜ್ಯದಲ್ಲಿ ೧೬೦ ಟ್ರಾನ್ಸ್ಫಾರ್ಮರ್ ಬ್ಯಾಂಕ್ ಸ್ಥಾಪನೆ ಮಾಡಲಾಗಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಅವರು ಗುರುವಾರ ವಿಧಾನಸಭೆಗೆ ತಿಳಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ೧೬೯ ಟ್ರಾನ್ಸ್ಫಾರ್ಮರ್ ದುರಸ್ತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ೨೪ ಗಂಟೆಯೊಳಗೆ ಟಿಸಿ ದುರಸ್ತಿಪಡಿಸುವಂತಹ ವ್ಯವಸ್ಥೆಗಾಗಿ ಇಲಾಖೆ ವಿಶೇಷ ಆ್ಯಪ್ ರೂಪಿಸಲಿದೆ. ಇದರಿಂದ ಕೆಟ್ಟು ಹೋಗಿರುವ ಟಿಸಿಗಳು ಯಾವಾಗ ದುರಸ್ತಿಯಾಗುತ್ತದೆ, ಯಾವಾಗ ಮರು ಪ್ರತಿಷ್ಠಾಪಿಸಲಾಗುತ್ತದೆ ಎಂಬ ವಿವರಗಳನ್ನು ಜನಸಾಮಾನ್ಯರು ಕುಳಿತ ಕಡೆಯಿಂದಲೇ ಅರಿಯಬಹುದು ಎಂದರು. ಇನ್ನು ರಾಜ್ಯದಲ್ಲಿ ಇಂಧನ ವಲಯವನ್ನು ಯಾವುದೇ ರೀತಿ ಖಾಸಗಿಕರಣ ಮಾಡುವುದಿಲ್ಲ. ಆ ಉದ್ದೇಶವೂ ಇಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ವಿಧಾನಸಭೆಯಲ್ಲಿ ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಕರುಣಾಕರ ರೆಡ್ಡಿ ಮತ್ತಿತರ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೈಗಾರಿಕೋದ್ಯಮಿಗಳಿಗೆ ಕಡಿಮೆ ದರದಲ್ಲಿ ಗುಣಮಟ್ಟದ ವಿದ್ಯುತ್ ಪೂರೈಸಲು ಸರ್ಕಾರ ಗಂಭೀರ ಪ್ರಯತ್ನ ಮಾಡಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ

ಬೆಂಗಳೂರು, ಸೆ. ೧೬: ಕರ್ನಾಟಕ ರಾಜ್ಯದ ಕ್ರೆöÊಂ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬೆಂಗಳೂರು ಅಪರಾಧ ವಿಭಾಗದ, ಆ್ಯಂಟಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳ ತಂಡ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿ ಅಪಾರ ಪ್ರಮಾಣದ ಮಾದಕವಸ್ತು ಮತ್ತು ಅದರ ತಯಾರಿಕೆಗಾಗಿ ಬಳಸಲಾಗುತ್ತಿದ್ದ ರಾಸಾಯನಿಕಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಎಲೆಕ್ಟಾçನಿಕ್ ಸಿಟಿಯಲ್ಲಿ ಮಾದಕ ದ್ರವ್ಯಗಳನ್ನು ತಯಾರಿಸುತ್ತಿದ್ದ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಪಾರ ಪ್ರಮಾಣದ ಮಾದಕವಸ್ತು ಮತ್ತು ಅದರ ತಯಾರಿಕೆಗಾಗಿ ಬಳಸಲಾಗುತ್ತಿದ್ದ ರಾಸಾಯನಿಕಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ನಿಷೇಧಿತ ಎಂಡಿಎAಎ ಮಾದಕವಸ್ತು ತಯಾರಿಸುತ್ತಿದ್ದ ಆರೋಪದ ಮೇರೆಗೆ ನೈಜಿರಿಯಾ ಮೂಲದ ಜಾನ್ ಎಂಬಾತನನ್ನು ಬಂಧಿಸಲಾಗಿದೆ. ಅಲ್ಲದೆ ಆತನಿಂದ ಸುಮಾರು ರೂ. ೨ ಕೋಟಿಗೂ ಅಧಿಕ ಮೌಲ್ಯದ ಮಾದಕವಸ್ತು ಮತ್ತು ಅದರ ತಯಾರಿಕೆಯಲ್ಲಿ ಬಳಸಲಾಗುತ್ತಿದ್ದ ರಾಸಾಯನಿಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅಧಿಕಾರಿಗಳ ಮೂಲಗಳ ಪ್ರಕಾರ ಎಲೆಕ್ಟಾçನಿಕ್ ಸಿಟಿ ಪಕ್ಕದ ಬೆಟ್ಟದಾಸನಪುರದಲ್ಲಿ ವೃದ್ಧ ದಂಪತಿಗಳಿAದ ಮನೆಯನ್ನು ಬಾಡಿಗೆಗೆ ಪಡೆದಿದ್ದ ನೈಜೀರಿಯಾ ಪ್ರಜೆ ಜಾನ್, ತನ್ನ ರಾಸಾಯನಿಕ ಶಿಕ್ಷಣವನ್ನು ದುರುಪಯೋಗ ಪಡಿಸಿಕೊಂಡು ಮನೆಯಲ್ಲೇ ಸಿಂಥೆಟಿಕ್ ಡ್ರಗ್ಸ್ ತಯಾರಿಕೆಯಲ್ಲಿ ತೊಡಗಿದ್ದ, ಇದಕ್ಕೆ ಬೇಕಾಗುವ ಎಲ್ಲ ರೀತಿಯ ರಾಸಾಯನಿಕಗಳನ್ನು ಅಪಾರ ಪ್ರಮಾಣದಲ್ಲಿ ಮನೆಯಲ್ಲಿ ದಾಸ್ತಾನು ಮಾಡಿಟ್ಟಿದ್ದ ಎನ್ನಲಾಗಿದೆ.

ಗುಜರಾತ್ ನೂತನ ಸಚಿವರಾಗಿ ಪ್ರಮಾಣವಚನ

ಗುಜರಾತ್, ಸೆ. ೧೬: ಮಾಜಿ ವಿಧಾನಸಭಾ ಸ್ಪೀಕರ್ ರಾಜೇಂದ್ರ ತ್ರಿವೇದಿ ಮತ್ತು ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ಜಿತು ವಾಘಾನಿ ಸೇರಿದಂತೆ ೨೪ ಶಾಸಕರು ಗುರುವಾರ ಗುಜರಾತ್ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಹಿಂದಿನ ವಿಜಯ್ ರೂಪಾನಿ ನೇತೃತ್ವದ ಸಂಪುಟದಲ್ಲಿದ್ದ ಯಾವುದೇ ಸಚಿವರಿಗೆ ಈ ಬಾರಿ ಅವಕಾಶ ನೀಡಿಲ್ಲ. ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರು ೧೦ ಶಾಸಕರಿಗೆ ಸಂಪುಟ ದರ್ಜೆ ಸಚಿವರಾಗಿ ಮತ್ತು ೧೪ ಮಂದಿಗೆ ರಾಜ್ಯ ಸಚಿವರಾಗಿ ಹಾಗೂ ಐವರು ಸ್ವತಂತ್ರ ಖಾತೆ ಸಚಿವರು ಸೇರಿದಂತೆ ೨೪ ಮಂದಿಗೆ ಪ್ರಮಾಣವಚನ ಬೋಧಿಸಿದರು. ರಾಜೇಂದ್ರ ತ್ರಿವೇದಿ, ಜಿತು ವಾಘನಿ, ಋಷಿಕೇಶ್ ಪಟೇಲ್, ಪೂರ್ಣೇಶ್ ಮೋದಿ, ರಾಘವಜಿ ಪಟೇಲ್, ಕಾನುಭಾಯಿ ದೇಸಾಯಿ, ಕಿರಿತ್ಸಿನ್ ರಾಣಾ, ನರೇಶ್ ಪಟೇಲ್, ಪ್ರದೀಪ್ ಪರ್ಮಾರ್ ಮತ್ತು ಅರ್ಜುನ್ ಸಿಂಗ್ ಚೌಹಾಣ್ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ನಾಯಕತ್ವ ತ್ಯಜಿಸಲಿರುವ ವಿರಾಟ್ ಕೊಯ್ಲಿ

ದುಬೈ, ಸೆ. ೧೬: ಯುಎಇಯಲ್ಲಿ ನಡೆಯಲಿರುವ ಟಿ-೨೦ ವಿಶ್ವಕಪ್ ನಂತರ ಭಾರತದ ಟಿ-೨೦ ನಾಯಕನ ಸ್ಥಾನ ತ್ಯಜಿಸುವುದಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. ಆದರೆ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ವಿರಾಟ್ ಕೊಹ್ಲಿ ಅವರ ಈ ನಿರ್ಧಾರ ರೋಹಿತ್ ಶರ್ಮಾ ಅವರು ಟಿ-೨೦ ತಂಡದ ನಾಯಕರಾಗಲು ದಾರಿ ಮಾಡಿಕೊಡಲಿದೆ. ಅಕ್ಟೋಬರ್‌ನಲ್ಲಿ ದುಬೈನಲ್ಲಿ ನಡೆಯಲಿರುವ ಟಿ-೨೦ ವಿಶ್ವಕಪ್ ನಂತರ ನಾನು ಟಿ-೨೦ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಕೊಹ್ಲಿ ಅವರು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತನ ಮೇಲೆ ಹಲ್ಲೆ

ಮೈಸೂರು, ಸೆ. ೧೬: ನಗರದಲ್ಲಿ ಗುರುವಾರ ದೇವಸ್ಥಾನ ತೆರವು ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ್ದರಿಂದ ಪರಿಸ್ಥಿತಿ ಬಿಗಡಾಯಿಸಿತ್ತು. ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ ಹೇಳಿಕೆಯನ್ನು ರೆಕಾರ್ಡಿಂಗ್ ಮಾಡುವಾಗ ಕೌಸರ್ ನ್ಯೂಸ್ ಪ್ರಧಾನ ಸಂಪಾದಕ ಮೊಹಮ್ಮದ್ ಸಪ್ಧಾರ್ ಖೈಸರ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಪ್ರತಿಭಟನೆಯನ್ನು ರೆಕಾರ್ಡ್ ಮಾಡಿಕೊಳ್ಳುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವೇದಿಕೆ ಕಾರ್ಯಕರ್ತರು, ವೀಡಿಯೋವನ್ನು ಡಿಲೀಟ್ ಮಾಡುವಂತೆ ಒತ್ತಾಯಿಸಿ ಮೊಹಮ್ಮದ್ ಮೇಲೆ ಹಲ್ಲೆ ನಡೆಸಿದ್ದಾರೆ. ತಾನೊಬ್ಬ ಪತ್ರಕರ್ತ ಎಂದು ಹೇಳಿದ್ದರೂ ಪೊಲೀಸರ ಸಮ್ಮುಖದಲ್ಲಿಯೇ ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ.

ಬಿಜೆಪಿ ಸಂಸದರಿಗೆ ಮುತ್ತಿಗೆ

ಚಿಕ್ಕಮಗಳೂರು, ಸೆ. ೧೬: ದೇವಾಲಯಗಳ ತೆರವು ವಿಚಾರಕ್ಕೆ ಸಂಬAಧಿಸಿದAತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಹಿಂದೂಪರ ಸಂಘಟನ ಕಾರ್ಯಕರ್ತರು ಸಂಸದ ಪ್ರತಾಪ್ ಸಿಂಹ ಹಾಗೂ ತೇಜಸ್ವಿ ಸೂರ್ಯ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಂಘಟನೆಗಳ ಪ್ರತಿಭಟನೆ ವೇಳೆ ಇಬ್ಬರು ಸಂಸದರನ್ನು ಸುತ್ತುವರೆದು, ಸರಕಾರದ ನಡೆಯನ್ನು ಖಂಡಿಸಿದರು.

೧೦೪೦ ವೈದ್ಯರ ನೇಮಕ

ಬೆಂಗಳೂರು, ಸೆ. ೧೬: ಕೋವಿಡ್ ಸನ್ನಿವೇಶದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ ಕಲ್ಪಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ೧೦೪೦ ವೈದ್ಯರನ್ನು ನೇಮಿಸಿಕೊಂಡಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಗುರುವಾರ ವಿಧಾನಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ದಿನಕರ್ ಕೇಶವಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ೮೬೦ ವೈದ್ಯರು ಕೆಲಸದ ಮೇಲೆ ಹಾಜರಾಗಿದ್ದಾರೆ. ಅವರಿಗೆ ಈಗಾಗಲೇ ಸ್ಥಳ ನಿಯುಕ್ತಿ ಮಾಡಲಾಗಿದೆ ಎಂದರು. ಇನ್ನು ೧೮೦ ಸ್ಥಳಗಳಿಗೆ ನೇಮಕಾತಿ ಮಾಡಿಕೊಂಡ ವೈದ್ಯರು ಕೆಲಸಕ್ಕೆ ಹಾಜರಾಗಿಲ್ಲ. ಅವರ ಸಮಸ್ಯೆಗಳನ್ನು ಕೇಳಿ ಶೀಘ್ರವೇ ಸ್ಥಳ ನಿಯುಕ್ತಿ ಮಾಡಲಾಗುವುದು ಎಂದು ತಿಳಿಸಿದರು.

ರೈತರ ವಿರುದ್ಧದ ಕೇಸ್ ಹಿಂತೆಗೆದುಕೊಳ್ಳಲು ನಿರ್ಧಾರ

ಲಖನೌ, ಸೆ. ೧೬: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ, ರೈತರ ವಿರುದ್ಧದ ಸುಮಾರು ೯೦೦ ಕೇಸ್‌ಗಳನ್ನು ಹಿಂತೆಗೆದುಕೊಳ್ಳಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ. ಪೈರನ್ನು ಸುಡುವ ಮೂಲಕ ಪರಿಸರ ಮಾಲಿನ್ಯಕ್ಕೆ ಕಾರಣವಾದ ಆರೋಪದ ಮೇರೆಗೆ ರೈತರ ಮೇಲೆ ಕೇಸ್ ಹಾಕಲಾಗಿತ್ತು. ಈ ಸಂಬAಧದ ರಾಜ್ಯ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ ನಂತರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅವನಿಶ್ ಅವಾಸ್ತಿ ರೈತರ ಮೇಲಿನ ಕೇಸ್ ಹಿಂಪಡೆಯುವ ಆದೇಶವನ್ನು ಹೊರಡಿಸಿದ್ದಾರೆ. ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿಯಲ್ಲಿ ರೈತರು ಪ್ರಮುಖ ಪಾತ್ರ ನಿರ್ವಹಿಸುತ್ತಾರೆ. ಆದ್ದರಿಂದ ಪೈರನ್ನು ಸುಟ್ಟಿದ್ದಕ್ಕಾಗಿ ರೈತರ ವಿರುದ್ಧ ಹಾಕಲಾಗಿದ್ದ ೮೬೮ ಕೇಸ್‌ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಅವಾಸ್ತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೊರೊನಾ ಸಾಂಕ್ರಾಮಿಕದಿAದ ಆರ್ಥಿಕ ತೊಂದರೆಯಿAದ ಸಂಕಷ್ಟ ಪಡುತ್ತಿರುವ ರೈತರ ಹಿತಾಸಕ್ತಿ ರಕ್ಷಿಸುವ ಸಲುವಾಗಿ ವಿವಿಧ ಜಿಲ್ಲೆಗಳಲ್ಲಿ ದಾಖಲಾಗಿದ್ದ ಕೇಸ್‌ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಆದೇಶಿಸಿರುವುದಾಗಿ ಅವಾಸ್ತಿ ಹೇಳಿದ್ದಾರೆ.