ಮಡಿಕೇರಿ, ಸೆ. ೧೭: ಮಡಿಕೇರಿ, ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿಗೆ ಸಂಬAಧಿಸಿದAತೆ ತಾ. ೨೮ ಮತ್ತು ೨೯ ರಂದು ಪಿಂಚಣಿ ಹಾಗೂ ಕಂದಾಯ ಅದಾಲತ್ ನಡೆಯಲಿದೆ.
ತಾ. ೨೮ ರಂದು ಮಡಿಕೇರಿಯಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ, ತಾ. ೨೯ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಪೊನ್ನಂಪೇಟೆಯಲ್ಲಿ ಹಾಗೂ ತಾ. ೨೯ ರಂದು ಮಧ್ಯಾಹ್ನ ೩ ಗಂಟೆಗೆ ವೀರಾಜಪೇಟೆಯಲ್ಲಿ ನಡೆಯಲಿದೆ. ಆಯಾಯ ತಾಲೂಕು ಕೇಂದ್ರದ ತಹಶೀಲ್ದಾರ್ ಅವರ ಕಚೇರಿಯಲ್ಲಿ ಕಂದಾಯ ಅದಾಲತ್ ಜರುಗಲಿದೆ. ಪಿಂಚಣಿ ಹಾಗೂ ಕಂದಾಯ ಅದಾಲತ್ ನಡೆಸಲು ಎಲ್ಲಾ ಪೂರ್ವಭಾವಿ ಸಿದ್ಧತೆಗಳೊಂದಿಗೆ ಕಡತ ತಯಾರಿಸಿ ಸೂಕ್ತ ಕ್ರಮ ಕೈಗೊಳ್ಳಲು ಮತ್ತು ಈ ದಿನದಂದು ಸಂಬAಧಿಸಿದ. ಅಧಿಕಾರಿಗಳು, ನೌಕರರುಗಳೊಂದಿಗೆ ಕಡ್ಡಾಯವಾಗಿ ಹಾಜರಿರಬೇಕೆಂದು ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು ತಿಳಿಸಿದ್ದಾರೆ.