ಮಡಿಕೇರಿ, ಸೆ.೧೭: ಜಿಲ್ಲೆಯಲ್ಲಿ ಶುಕ್ರವಾರ ೫೪ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೧೪, ಸೋಮವಾರಪೇಟೆ ತಾಲೂಕಿನಲ್ಲಿ ೧೩, ವೀರಾಜಪೇಟೆ ತಾಲೂಕಿನಲ್ಲಿ ೨೭ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೪,೪೯೫ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೩೨ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೩೪೬೩ ಮಂದಿ ಗುಣಮುಖರಾಗಿದ್ದಾರೆ. ೬೧೦ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಇದುವರೆಗೆ ಒಟ್ಟು ೪೨೨ ಮರಣ ಪ್ರಕರಣಗಳು ವರದಿಯಾಗಿವೆÉ. ಕಂಟೈನ್ಮೆAಟ್ ವಲಯಗಳ ಸಂಖ್ಯೆ ೫೩ ಆಗಿವೆÉ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೧.೮೧ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.