ಮಡಿಕೇರಿ, ಸೆ. ೧೭: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಭೋವಿ ಜನಾಂಗದ ಆರ್ಥಿಕ ಅಭಿವೃದ್ಧಿಗೆ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ ಹಾಗೂ ಮೈಕ್ರೋ ಕ್ರೆಡಿಟ್ (ಪ್ರೇರಣಾ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ) ಯೋಜನೆ(ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ನಿಗಮದ ವೆಬ್‌ಸೈಟ್ hಣಣಠಿs://ಞbಜಛಿ. ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅಪ್‌ಲೋಡ್ ಮಾಡಿ ಅರ್ಜಿಗಳನ್ನು ಅಕ್ಟೋಬರ್ ೧೪ ರೊಳಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಮಡಿಕೇರಿ-೫೭೧೨೦೧ ದೂ. ೦೮೨೭೨-೨೨೮೮೫೭ನ್ನು ಸಂಪರ್ಕಿಸಬಹುದೆAದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.