ಸೋಮವಾರಪೇಟೆ, ಸೆ. ೧೭: ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ವಿದ್ಯಾಭಿಯಾನ ಅಂಗವಾಗಿ ಗೌಡಳ್ಳಿ ಪ್ರೌಢ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ವಿದ್ಯಾಸೇತು ಕೈಪಿಡಿಯನ್ನು ರೋಟರಿ ಅಧ್ಯಕ್ಷ ಎಚ್.ಪಿ. ಮೋಹನ್ ವಿತರಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ಕುಸಿಯದಂತೆ ನಾವೆಲ್ಲರೂ ಎಚ್ಚರ ವಹಿಸಬೇಕಾಗಿದೆ. ವಿದ್ಯಾರ್ಥಿ ಸಮಯವನ್ನು ವ್ಯರ್ಥ ಮಾಡದೆ ಓದಿ, ಬರೆದು ಅಭ್ಯಾಸ ಮಾಡಬೇಕು. ನಮ್ಮ ಕೈಪಿಡಿ ಯಲ್ಲೂ ಪರೀಕ್ಷೆಗೆ ಪೂಕರವಾದ ವಿಷಯಗಳಿದ್ದು, ವಿದ್ಯಾರ್ಥಿಗಳು ಪಠ್ಯದೊಂದಿಗೆ ಇದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ರೋಟರಿ ಕಾರ್ಯದರ್ಶಿ ವಸಂತ್, ಗೌಡಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಜಿ.ಪಿ. ಸುನಿಲ್, ಗೌಡಳ್ಳಿ ಗ್ರಾಮ ಪಂಚಾಯಿತಿ ಕಾರ್ಯಕ್ರಮದಲ್ಲಿ ರೋಟರಿ ಕಾರ್ಯದರ್ಶಿ ವಸಂತ್, ಗೌಡಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಜಿ.ಪಿ. ಸುನಿಲ್, ಗೌಡಳ್ಳಿ ಗ್ರಾಮ ಪಂಚಾಯಿತಿ

ಸದಸ್ಯರಾದ ನವೀನ್, ಮಂಜುನಾಥ್, ಗಣೇಶ್, ಸಿ.ಇ. ವೆಂಕಟೇಶ್, ಪ್ರಭಾರ ಮುಖ್ಯ ಶಿಕ್ಷಕ ಜಾದವ್, ಸಹಶಿಕ್ಷಕ ಪೂವಯ್ಯ ಉಪಸ್ಥಿತರಿದ್ದರು.