ಮಡಿಕೇರಿ, ಸೆ. ೧೭: ಅಲ್ಪಸಂಖ್ಯಾತರಿಗೆ ಮೀಸಲಿರುವ ಪ್ರಧಾನಮಂತ್ರಿ ಅವರ ೧೫ ಅಂಶಗಳ ಕಾರ್ಯಕ್ರಮಗಳನ್ನು ತಲುಪಿಸುವಂತೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ಅವರ ೧೫ ಅಂಶಗಳ ಕಾರ್ಯಕ್ರಮ ಅನುಷ್ಠಾನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಲ್ಪಸಂಖ್ಯಾತರಿಗೆ ಮೀಸಲಿರುವ ಯೋಜನೆಗಳ ದಾಖಲಾತಿಗಳ ಕರಪತ್ರ ಹಾಗೂ ಪೋಸ್ಟರ್‌ಗಳನ್ನು ತಯಾರಿಸಿ ಮಾಹಿತಿ ನೀಡಬೇಕು. ಸರ್ಕಾರದ ಅನುದಾನ ಯಾವುದೇ ರೀತಿಯಲ್ಲಿ ವ್ಯಪಗತವಾಗದಂತೆ ಶೇಕಡವಾರು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ ಅವರು ಮಾತನಾಡಿ, ಅಲ್ಪಸಂಖ್ಯಾತರ ಯೋಜನಾ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸಬೇಕು. ಆಯಾಯ ವರ್ಷದಲ್ಲಿ ಪ್ರಗತಿ ಸಾಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಾಮ ನಿರ್ದೇಶಿತ ಸದಸ್ಯ ಕೆ.ಟಿ. ಬೇಬಿ ಮ್ಯಾಥ್ಯು ಅವರು ಮಾತನಾಡಿ, ಸರ್ಕಾರದಿಂದ ಅಲ್ಪಸಂಖ್ಯಾತರಿಗೆ ಹಲವು ಕಾರ್ಯಕ್ರಮಗಳಿದ್ದು, ಅವುಗಳನ್ನು ತಲುಪಿಸುವಂತಾಗಬೇಕು. ಆ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಮಟ್ಟಗಳಲ್ಲಿ ಮತ್ತಷ್ಟು ಜಾಗೃತಿ ಮೂಡಿಸಬೇಕು ಎಂದರು.

ಸದಸ್ಯ ಲತೀಫ್ ಅವರು ಮಾತನಾಡಿ, ಕುಶಾಲನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆ ಹೆಚ್ಚಿನ ಕೊಠಡಿ ನಿರ್ಮಿಸಬೇಕು ಎಂದು ಮನವಿ ಮಾಡಿದರು.

ಮತ್ತೊಬ್ಬ ಸದಸ್ಯರಾದ ಕೆ.ಎ. ಯಾಕುಬ್ ಅವರು ಮಾತನಾಡಿ, ಅಲ್ಪಸಂಖ್ಯಾತರಿಗೆ ಕರ್ನಾಟಕ ಅಭಿವೃದ್ಧಿ ಮಂಡಳಿಯಿAದ ಮತ್ತಷ್ಟು ಸೌಲಭ್ಯಗಳು ದೊರೆಯಬೇಕು. ಜೊತೆಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಬೇಕು ಎಂದರು.

ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಯೋಜನೆಯಡಿ ಶೇ. ೮೨ ರಷ್ಟು ಪ್ರಗತಿ ಹೊಂದಿದ್ದು, ನಿರ್ಗತಿಕ ಮಕ್ಕಳ ಕುಟೀರಕ್ಕೆ ಅನುದಾನ ಹಾಗೂ ಉದ್ಯೋಗಿನಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗಾಗಿ ಶೇ. ೧೦೦ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ವಿ. ಸುರೇಶ್ ಮಾಹಿತಿ ನೀಡಿದರು.

ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಮುತ್ತುರಾಜು ಅವರು ಕೃಷಿ ಇಲಾಖೆಯಿಂದ ಅಲ್ಪ ಸಂಖ್ಯಾತರಿಗೆ ಇರುವ ಯೋಜನೆಗಳ ಸಲುವಾಗಿ ಜಿಲ್ಲೆಯಲ್ಲಿ ಪ್ರಗತಿ ಸಾಧಿಸಲು ಶ್ರಮಿಸಲಾಗಿದೆ.

ಕೃಷಿ ಪರಿಕರಗಳು ಮತ್ತು ಗುಣಮಟ್ಟ ನಿಯಂತ್ರಣದಲ್ಲಿ ಶೇ. ೨೮.೪೯ ರಷ್ಟು ಹಾಗೂ ಕೇಂದ್ರ ಪುರಸ್ಕೃತ ಯೋಜನೆಯಲ್ಲಿ ಒಟ್ಟು ಶೇ. ೧೦.೪೬ ರಷ್ಟು ಪ್ರಗತಿಯನ್ನು ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.

ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ್ ಅವರು ಮಾಹಿತಿ ನೀಡಿ, ಮತ್ಸö್ಯವಾಹಿನಿ ಯೋಜನೆಯಡಿ ಮಾರಾಟ ಸಂಬAಧಿತ ಅರ್ಜಿಗಳು ಸಲ್ಲಿಕೆಯಾಗುತ್ತಿದೆ. ಮೀನುಗಾರಿಕೆ ಸಲಕರಣೆ ಕಿಟ್‌ಗಳನ್ನು ಕೊಡಲಾಗುತ್ತಿದೆ. ಆರ್‌ಕೆವಿವೈ ಯೋಜನೆಯಡಿ ಶೇ. ೧೦೦ ರಷ್ಟು ಪ್ರಗತಿ ಸಾಧಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅಲ್ಪಸಂಖ್ಯಾತರಿಗೆ ಹಲವು ಯೋಜನೆ ತಲುಪಿಸಲು ಶ್ರಮಿಸಲಾಗಿದೆ ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕರಾದ ಸುರೇಶ್ ಭಟ್ ಅವರು ಮಾಹಿತಿ ನೀಡಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ ಅವರು ಜೇನು ಕೃಷಿ, ಕೀಟ ಮತ್ತು ರೋಗ ನಿಯಂತ್ರಣ ಹಾಗೂ ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಗಳಲ್ಲಿ ಒಟ್ಟು ಆರ್ಥಿಕವಾಗಿ ಶೇ. ೨೬.೦೧ ಹಾಗೂ ಭೌತಿಕವಾಗಿ ಶೇ. ೫೮.೯೬ ರಷ್ಟು ಪ್ರಗತಿಯನ್ನು ಹೊಂದಲಾಗಿದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್, ಆಹಾರ ಇಲಾಖೆ ಉಪ ನಿರ್ದೇಶಕರಾದ ಗೌರವ ಕುಮಾರ್ ಶೆಟ್ಟಿ ಹಾಗೂ ಇತರರು ತಮ್ಮ ಇಲಾಖಾ ವ್ಯಾಪ್ತಿಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.