ಸುಂಟಿಕೊಪ್ಪ, ಸೆ. ೧೬: ಜಿಲ್ಲಾ ಜಾತ್ಯತೀತ ಜನತಾದಳ ಅಲ್ಪಸಂಖ್ಯಾತ ಘಟಕದ ಬೂತ್‌ಮಟ್ಟದ ಸಮಿತಿಗಳನ್ನು ನೂತನವಾಗಿ ರಚಿಸಲಾಗುವುದು ಎಂದು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸಾಕ್‌ಖಾನ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ತಳಮಟ್ಟದಿಂದ ಪಕ್ಷವನ್ನು ಸಂಘಟಿಸುವ ದಿಸೆಯಲ್ಲಿ ಪಕ್ಷದಲ್ಲಿ ಅಲ್ಪಸಂಖ್ಯಾತ ಘಟಕದ ಬೂತ್ ಸಮಿತಿಗಳ ರಚನೆಯನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.