ಆಲೂರು-ಸಿದ್ದಾಪುರ, ಸೆ. ೧೭: ವಿದ್ಯಾರ್ಥಿಗಳು ಕಲಿಕೆ ದಿನಗಳಲ್ಲಿ ಮನೋಸ್ಥೆöÊರ್ಯ, ಆತ್ಮಾಭಿಮಾನ ಹಾಗೂ ಇಚ್ಛಾಸಕ್ತಿಗಳಂತಹ ಗುಣಗಳನ್ನು ಅಳವಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಬಹುದಾಗಿದೆ ಎಂದು ನಿವೃತ್ತ ಸುಬೇದಾರ್ ಕಾಕೇರ ಅಯ್ಯಣ್ಣ ಅಭಿಪ್ರಾಯಪಟ್ಟರು. ಅವರು ಆಲೂರು-ಸಿದ್ದಾಪುರ ಸರಕಾರಿ ಪ್ರೌಢಶಾಲೆಯ ರಾಷ್ಟಿçÃಯ ಸೇವಾ ಯೋಜನೆ ಘಟಕ ಮತ್ತು ಇಕೋ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ರಕ್ಷಣಾ ಇಲಾಖೆಯ ವಿವಿಧ ವಿಭಾಗಗಳಲ್ಲಿ ಉದ್ಯೋಗವಕಾಶ ಹಾಗೂ ಭಾರತೀಯ ಭೂ ಸೇನೆಯ ಪಾತ್ರದ ಕುರಿತು ಹಮ್ಮಿಕೊಂಡಿದ್ದ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯ ಕಲಿಕೆಯ ಜೊತೆಯಲ್ಲಿ ಪ್ರತಿಯೊಂದು ಕ್ಷೇತ್ರದ ಬಗ್ಗೆ ಇಚ್ಛಾಸಕ್ತಿಯನ್ನು ಬೆಳೆಸಿಕೊಳ್ಳ ಬೇಕು, ತಾನು ಮುಂದೆ ಯಾವ ಕ್ಷೇತ್ರದಲ್ಲಿ ಸೇವೆ ಸಲ್ಲಿಸಬೇಕೆಂಬುದನ್ನು ತಾನೆ ಆಯ್ಕೆ ಮಾಡಿಕೊಳ್ಳುವಂತಹ ಅಭಿರುಚಿಯನ್ನು ಬೆಳೆಸಿಕೊಳ್ಳುವ ಮೂಲಕ ದೇಶಕ್ಕಾಗಿ ಸೇವೆ ಸಲ್ಲಿಸುವಂತೆ ಮನವಿ ಮಾಡಿದರು.

ಶಾಲಾ ಮುಖ್ಯ ಶಿಕ್ಷಕಿ ಎಸ್. ಶ್ರುತಿ ಮಾತನಾಡಿ, ಕಳೆದ ೨ ವರ್ಷಗಳಿಂದ ಕೋವಿಡ್ ಪಿಡುಗಿನಿಂದ ಶಾಲಾ-ಕಾಲೇಜುಗಳು ಪ್ರಾರಂಭಗೊAಡಿರಲಿಲ್ಲ. ಶಾಲೆಯ ಎನ್‌ಎಸ್‌ಎಸ್ ಘಟಕ ಮತ್ತು ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಲ್ಲಿ ಬೌದ್ದಿಕ ಮಟ್ಟ ಅಭಿವೃದ್ಧಿಗೊಳಿಸುವ ಉದ್ದೇಶದಿಂದ ಸ್ಥಾಪಿತವಾಗಿದ್ದು ಈ ಮೂಲಕ ವಿದ್ಯಾರ್ಥಿಗಳು ಶಾಲೆಯಲ್ಲಿ ಸ್ಥಾಪನೆ ಮಾಡಿರುವ ವಿವಿಧ ಸಂಘಟನೆಗಳಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ. ಎಂ.ಸಿ. ಅಧ್ಯಕ್ಷ ಭಾರತೇಶ್, ಎನ್‌ಎಸ್‌ಎಸ್ ಘಟಕದ ಸಂಚಾಲಕ ಧರ್ಮಪ್ಪ, ಇಕೋ ಕ್ಲಬ್ ಸಂಚಾಲಕಿ ಸಹನ, ಪತ್ರಕರ್ತ ದಿನೇಶ್ ಮಾಲಂಬಿ ಹಾಜರಿದ್ದರು.