ಕೂಡಿಗೆ, ಸೆ. ೧೬: ಭುವನಗಿರಿ ಗ್ರಾಮದ ಸಮುದಾಯ ಭವನದಲ್ಲಿ ಕುಶಾಲನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ವೇದಿಕೆ ವತಿಯಿಂದ ಸಮುದಾಯದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆಯನ್ನು ಯುವ ವೇದಿಕೆಯ ಅಧ್ಯಕ್ಷ ಪುನೀತ್ ನೆರವೇರಿಸಿದರು.

ಮುಖ್ಯ ಅತಿಥಿಯಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಡಿ.ಆರ್. ಪ್ರಭಾಕರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಗಣೇಶ್ ಪಾಲ್ಗೊಂಡು ಮಾತನಾಡಿದರು.

ವೇದಿಕೆಯಲ್ಲಿ ಭುವನಗಿರಿ ಸಮುದಾಯ ಭವನದ ಸ್ಥಳ ದಾನಿ ದೊಡ್ಡಯ್ಯ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಗಿರೀಶ್ ಕುಮಾರ್, ಹರೀಶ್, ತಾಲೂಕು ಪಂಚಾಯಿತಿ ಸದಸ್ಯ ಗಣೇಶ್, ಭುವನಗಿರಿ ದೊಡ್ಡಯ್ಯ ಗಂಗಾಧರ, ಉದಯಕುಮಾರ್ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರ ಕೃಷ್ಣ, ಮಂಜುನಾಥ, ಭರಮಣ್ಣ ಸೇರಿದಂತೆ ನೂರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಭರಮಣ್ಣ ನಿರೂಪಿಸಿ, ಸ್ವಾಗತಿಸಿದರು. ಪ್ರಸನ್ನ ವಂದಿಸಿದರು.