ಮಡಿಕೇರಿ, ಸೆ.೧೮: ಪ್ರಸಕ್ತ (೨೦೨೧-೨೨) ಸಾಲಿನ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿ ಕೈಗಾರಿಕೆ, ಉತ್ಪಾದನಾ, ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಎಸ್.ಸಿ.,ಎಸ್.ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಮಾಜಿ ಸೈನಿಕ, ಅಂಗವಿಕಲರು, ಮಹಿಳೆಯರು, ಸಾಮಾನ್ಯ ವರ್ಗ, ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಉದ್ಯೋಗ ಮಾಡಿ ಕೊಳ್ಳುವವರಿಗೆ, ಗ್ರಾಮೀಣ ಪ್ರದೇಶದಲ್ಲಿ ಉದ್ದಿಮೆ ಘಟಕಗಳನ್ನು ಸ್ಥಾಪಿಸುವವರಿಗೆ ಬ್ಯಾಂಕಿನಿAದ ಗರಿಷ್ಠ ೨೫ ಲಕ್ಷಗಳವರೆಗೆ ಸಾಲವನ್ನು ನೀಡಿ ಗರಿಷ್ಠ ಶೇ.೨೫ ರಿಂದ ೩೫ ರವರೆಗೆ ಸಹಾಯಧನವನ್ನು ನೀಡಲಾಗುವುದು. ಈ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ತಿತಿತಿ.ಞviಛಿ.oಡಿg.iಟಿ (ಠಿmegಠಿ oಟಿಟiಟಿe ಚಿಠಿಠಿಟiಛಿಚಿಣioಟಿ) ನಲ್ಲಿ ಅರ್ಜಿ ಸಲ್ಲಿಸುವಾಗ (ಏಜೆನ್ಸಿ ಕೋಟ್ ಕೆವಿಐಬಿ) ಎಂದು ಅರ್ಜಿಯಲ್ಲಿ ಅಳವಡಿಸಿ ಅದರ ಪ್ರತಿಯೊಂದಿಗೆ ೨ ಪ್ರತಿ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸುವುದು. ಅಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ವಿವರಗಳಿಗೆ ಎಚ್.ಆರ್.ರಾಮಕೃಷ್ಣ, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಕೊಹಿನೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇವರ ಕಚೇರಿಯನ್ನು, ದೂ.ಸಂ.೦೮೨೭೨-೨೨೫೯೪೬, ೯೪೮೦೮೨೫೬೩೦ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಎಚ್.ಆರ್.ರಾಮಕೃಷ್ಣ ತಿಳಿಸಿದ್ದಾರೆ.