ಮಡಿಕೇರಿ, ಸೆ.೧೮: ಪ್ರಸಕ್ತ (೨೦೨೧-೨೨) ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸ ಲಾಗಿದೆ. ೫ ನೇ ತರಗತಿಯಲ್ಲಿ ಶೇ.೬೦ ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆ ಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಯಲ್ಲಿ ೬ ನೇ ತರಗತಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುವುದು. ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯ ರಿಂದ ದೃಢೀಕೃತಗೊಂಡ ಅಂಕ ಪಟ್ಟಿಯನ್ನು ಸಲ್ಲಿಸುವುದು. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ.೨ ಲಕ್ಷ ಒಳಗೆ ಇರಬೇಕು (ಈ ಬಗ್ಗೆ ತಹಶೀಲ್ದಾರ ಅವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು).

ಅರ್ಜಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ-೦೮೨೭೨-೨೨೫೫೩೧. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-೦೮೨೭೨-೨೨೩೫೫೨. ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-೦೮೨೭೬-೨೮೧೧೧೫. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ-೦೮೨೭೪-೨೪೯೪೭೬ ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.