ಮಡಿಕೇರಿ, ಸೆ. ೧೭: ನಾರಾಯಣ ಗುರು ಜನ್ಮ ದಿನಾಚರಣೆ ಪ್ರಯುಕ್ತ ದಲಿತ ಸಂಘರ್ಷ ಸಮಿತಿ ವತಿಯಿಂದ ತಾ. ೧೮ ರಂದು (ಇಂದು) ಮಧ್ಯಾಹ್ನ ೨.೩೦ಕ್ಕೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಕೊರೊನಾ ವಾರಿಯರ್ಸ್ಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.

ನಗರದ ಪತ್ರಿಕಾ ಭವನದಲ್ಲಿ ನಡೆಯುವ ಕಾರ್ಯಕ್ರಮವನ್ನು ನಗರಸಭಾ ಪೌರಾಯುಕ್ತ ಹೆಚ್.ವಿ. ರಾಮದಾಸ್ ಉದ್ಘಾಟಿಸಲಿದ್ದಾರೆ. ದ.ಸಂ.ಸ. ನಗರ ಸಂಚಾಲಕ ಸಿ.ಪಿ. ಸಿದ್ದೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ನಾರಾಯಣ ಗುರು ಅವರ ವಿಚಾರ ಮಂಡಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೋಟರಿ ಮಿಸ್ಟಿ ಹಿಲ್ಸ್ ರಾಜ್ಯಪಾಲ ಬಿ.ಕೆ. ರವೀಂದ್ರ ರೈ, ನಮ್ಮ ಕೊಡಗು ತಂಡದ ಸ್ಥಾಪಕಾಧ್ಯಕ್ಷ ನೌಷದ್ ಜನ್ನತ್, ದ.ಸಂ.ಸ. ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್, ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಭಾಗವಹಿಸಲಿದ್ದಾರೆ.