ಮಡಿಕೇರಿ ಸೆ.೧೮ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವಕರ್ಮ ಜಯಂತಿಯನ್ನು ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ, ವಿಶ್ವಕರ್ಮ ಸಮುದಾಯದ ಜಿಲ್ಲಾಧ್ಯಕ್ಷ ದೇವದಾಸ್ ಇತರರು ಇದ್ದರು.