ಮಡಿಕೇರಿ, ಸೆ. ೧೮ : ಸೋಮವಾರಪೇಟೆ ತಾಲೂಕು ಕೊಡಗರಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಗ್ರಾಮಗಳಾದ ಅಂದಗೋವೆ, ಕೊಡಗರಹಳ್ಳಿ, ಕಲ್ಲೂರು ಈ ಗ್ರಾಮಗಳನ್ನೊಳಗೊಂಡ ಗ್ರಾಮ ಸಭೆಯು ತಾ. ೨೧ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಕೊಡಗರಹಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗ್ರಾ.ಪಂ. ಅಧ್ಯಕ್ಷ ಆರ್.ಸುನೀತ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕೊಡಗರಹಳ್ಳಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.