*ಗೋಣಿಕೊಪ್ಪ, ಸೆ. ೧೯: ಕೊರೊನಾ ಸಂಕಷ್ಟ ಕಾಲದಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಹಿನ್ನೆಲೆಯಲ್ಲಿ ಗೋಣಿಕೊಪ್ಪ ಹರಿಶ್ಚಂದ್ರಪುರದ ಅಂಗನವಾಡಿ ಕಾರ್ಯಕರ್ತೆ ಲತಾ ಅವರನ್ನು ಸಂಜೀವಿನಿ ಒಕ್ಕೂಟ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಕಾವೇರಿ ಮಹಿಳಾ ಸಮಾಜದ ಆವರಣದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಸನ್ಮಾನ ನಡೆಯಿತು.
ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಮಂಜುಳಾ ನೇತೃತ್ವದಲ್ಲಿ ಗ್ರಾ.ಪಂ. ಸದಸ್ಯ ಪ್ರಮೋದ್ ಗಣಪತಿ, ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ಆರ್. ರಾಜೇಶ್ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಒಕ್ಕೂಟದ ಎಲ್.ಸಿ.ಆರ್.ಪಿ. ವರಲಕ್ಷಿ÷್ಮ, ಎಂ.ಬಿ.ಕೆ. ಗೌರಿ, ಬಿ.ಸಿ. ಸಖಿ, ಪ್ರಿಯದಿಲೀಪ್, ಆರೋಗ್ಯ ಇಲಾಖೆ ಬಿ.ಹೆಚ್.ಓ. ಶಿವಯ್ಯ, ಆರೋಗ್ಯ ಕಾರ್ಯಕರ್ತೆ ಶಿವಮ್ಮ ಸೇರಿದಂತೆ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.