ಮಡಿಕೇರಿ, ಸೆ. ೧೮: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ೨೦೨೦-೨೧ನೇ ಸಾಲಿನಲ್ಲಿ ಭಾರತ ಸರ್ಕಾರದಿಂದ ಅಧಿಕೃತ ರಾಷ್ಟಿçÃಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟçಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂರ‍್ರಾಷ್ಟಿçÃಯ ಮಟ್ಟದ ಕ್ರೀಡಾ ಕೂಟಗಳಲ್ಲಿ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ, ಇಲ್ಲಿ ಅರ್ಜಿ ಪಡೆದು ತಾ. ೨೫ ರವರೆಗೆ ಕಾಲಾವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ೦೮೨೭೨-೨೨೮೯೮೫ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ತಿಳಿಸಿದ್ದಾರೆ.