ಮಡಿಕೇರಿ, ಸೆ. ೧೮: ಕಾರ್ಮಿಕ ಅದಾಲತ್ ಪ್ರಯುಕ್ತ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರಕ್ಷಣಾ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮವು ವೀರಾಜಪೇಟೆಯ ನ್ಯಾಯಾಲಯ ಆವರಣದಲ್ಲಿ ನಡೆಯಿತು.
ವೀರಾಜಪೇಟೆಯ ಎರಡನೇ ಅಪರ ಮತ್ತು ಜಿಲ್ಲಾ ನ್ಯಾಯಾಧೀಶರಾದ ಎಸ್.ಆರ್. ದಿಂಡಲ್ ಕೊಪ್ಪ ಮಾತನಾಡಿ, ಸರ್ಕಾರ ಕಾರ್ಮಿಕರಿಗೆ ಹಲವು ಸೌಲಭ್ಯ ಕಲ್ಪಿಸುತ್ತಿದ್ದು, ಅದನ್ನು ಬಳಸಿಕೊಳ್ಳಬೇಕೆಂದರು.
ಕಾರ್ಮಿಕರು ಗುರುತಿನ ಚೀಟಿ ಮಾಡಿಸಿಕೊಳ್ಳಬೇಕು, ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು.
ವೀರಾಜಪೇಟೆ ತಾಲೂಕು ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎA. ಯತ್ನಟ್ಟಿ, ವೀರಾಜಪೇಟೆ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ವಿ. ಕೋನಪ್ಪ, ವೀರಾಜಪೇಟೆ ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ಸಿ. ಮಹಾಲಕ್ಷಿö್ಮ, ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಐ.ಆರ್. ಪ್ರಮೋದ್ ಹಾಗೂ ಇತರರು ಇದ್ದರು.