ಮಡಿಕೇರಿ, ಸೆ. ೧೮: ಸದಾ ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರು ತಮ್ಮ ಆರೋಗ್ಯದ ಬಗ್ಗೆಯೂ ಗಮನಹರಿಸು ವಂತಾಗಬೇಕೆAದು ಹಿರಿಯ ಪತ್ರಕರ್ತ ಶ್ರೀಕಾಂತ್ ಕಲ್ಲಮ್ಮನವರ ಕರೆ ನೀಡಿದರು.
ಕುಶಾಲನಗರ ಸಮೀಪದ ೭ನೇ ಹೊಸಕೋಟೆಯಲ್ಲಿ ನಡೆದ ಕೊಡಗು ಪ್ರೆಸ್‌ಕ್ಲಬ್‌ನ ನೂತನ ಆಡಳಿತ ಮಂಡಳಿಯ ಕಾರ್ಯಚಟುವಟಿಕೆಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಪತ್ರಕರ್ತರು ಸದಾ ಒತ್ತಡದಲ್ಲಿ ಕೆಲಸ ಮಾಡುತ್ತಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಹೊಸತನಗಳಿಗೂ ಹೊಂದಿಕೊಳ್ಳ ಬೇಕಾದ ಅನಿವಾರ್ಯತೆ ಇದೆ. ಕೋವಿಡ್ ಸಮಯದಲ್ಲಿಯೂ ಪತ್ರಕರ್ತರು ಸವಾಲುಗಳನ್ನು ಎದುರಿಸಬೇಕಾಯಿತು. ಇಂತಹ ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರು ಆರೋಗ್ಯದ ಬಗ್ಗೆಯೂ ಗಮನಹರಿಸುವಂತಾಗಬೇಕೆAದು ಕರೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಸವಿತಾ ರೈ, ಪತ್ರಕರ್ತರ ವೃತ್ತಿ ಬದುಕಿನಲ್ಲಿ ಅಭದ್ರತೆ ಕಾಡುತ್ತಿದೆ. ಪತ್ರಕರ್ತರ ಏಳಿಗೆಗಾಗಿ ಸಹಕಾರ ಸಂಘ ಸ್ಥಾಪಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪತ್ರಕರ್ತರು ಅಗತ್ಯ ಸಹಕಾರ ನೀಡಬೇಕೆಂದು ಕರೆ ನೀಡಿದರು.
ಕೊಡಗು ಪ್ರೆಸ್‌ಕ್ಲಬ್ ಮಾಜಿ ಅಧ್ಯಕ್ಷ ಅನಿಲ್ ಎಚ್.ಟಿ. ಮಾತನಾಡಿ, ಕಳೆದ ಅವಧಿಯ ಆಡಳಿತ ಮಂಡಳಿ ಉತ್ತಮ ಕಾರ್ಯಕ್ರಮಗಳ ಮೂಲಕ ಗಮನಸೆಳೆದಿದೆ. ಇದೀಗ ಹಲವು ನಿರೀಕ್ಷೆಗಳೊಂದಿಗೆ ಹೊಸ ತಂಡ ಬಂದಿದ್ದು, ತಂಡದಿAದ ಉತ್ತಮ ಕಾರ್ಯಕ್ರಮ ಮೂಡಿಬರಲಿ ಎಂದು ಆಶಿಸಿದರು.
ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ವೃತ್ತಿಯಲ್ಲಿ ಒತ್ತಡ ಇದ್ದೇ ಇದೆ. ವೈಯಕ್ತಿಕ ಹಿತಾಸಕ್ತಿಗಿಂತ ಸಂಘಟನೆ ಮುಖ್ಯವಾಗಿದ್ದು, ಸಂಘಟನೆ ಮತ್ತು ಪತ್ರಕರ್ತರು ಕಾರ್ಯನಿರ್ವಹಿಸುವ ಸಂಸ್ಥೆಯ ಹಿತಾಸಕ್ತಿ ಗಮನದಲ್ಲಿಟ್ಟು ಕೆಲಸ ಮಾಡಬೇಕಾಗುತ್ತದೆ ಎಂದರು.
ಪತ್ರಕರ್ತರು ಸಮಾಜಮುಖಿ ಯಾಗಿ ದೂರದೃಷ್ಟಿ ಇಟ್ಟುಕೊಂಡು ವರದಿ ಮಾಡಬೇಕಾಗುತ್ತದೆ. ಬೇರೆ ಬೇರೆ ವಿದ್ಯಮಾನಗಳನ್ನು ನಮ್ಮದೇ ರೀತಿಯಲ್ಲಿ ವಿಶ್ಲೇಷಿಸಬೇಕು ಎಂದ ಅವರು, ಶೀಘ್ರದಲ್ಲೇ ಸಹಕಾರ ಬ್ಯಾಂಕ್ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕೊಡಗು ಪ್ರೆಸ್‌ಕ್ಲಬ್ ಮಾಜಿ ಕಾರ್ಯದರ್ಶಿ ಕೆ.ಬಿ. ಮಂಜುನಾಥ್ ಮಾತನಾಡಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಪತ್ರಕರ್ತರಿಗೆ ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸದಾ ಒತ್ತಡದಲ್ಲಿದ್ದ ಪತ್ರಕರ್ತರು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ಕ್ಲಬ್ ಹಿರಿಯ ಉಪಾಧ್ಯಕ್ಷ ಸುಬ್ರಮಣಿ ಸ್ವಾಗತಿಸಿದರೆ, ಸಹ ಕಾರ್ಯದರ್ಶಿ ಪ್ರಜ್ಞಾ ಪ್ರಾರ್ಥಿಸಿ, ವಂದಿಸಿದರು. ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ನಿರೂಪಿಸಿದರು.