ಸಿದ್ದಾಪುರ, ಸೆ. ೧೯: ಮಾರ್ಗಮಧ್ಯದಲ್ಲಿ ಕಾಡಾನೆಯೊಂದು ಪ್ರತ್ಯಕ್ಷಗೊಂಡ ಹಿನ್ನೆಲೆಯಲ್ಲಿ ಕಾರು ಚಲಾಯಿಸುತ್ತಿದ್ದ ಕಾರು ಚಾಲಕರೋರ್ವರು ಗಾಬರಿಗೊಂಡು ತೋಟದೊಳಗೆ ನುಗ್ಗಿ ಮರಕ್ಕೆ ಅಪ್ಪಳಿಸಿರುವ ಘಟನೆ ನಡೆದಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸಿದ್ದಾಪುರ ಸಮೀಪದ ಬಾಡಗ ಬಾಣಂಗಾಲ ಗ್ರಾಮದ ಹುಂಡಿಯ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಬ್ಯಾಂಕ್‌ವೊAದರಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ತಮ್ಮ ಕಾರಿನಲ್ಲಿ ಪಾಲಿಬೆಟ್ಟ ದಿಂದ ಹುಂಡಿ ಸಿದ್ದಾಪುರ, ಸೆ. ೧೯: ಮಾರ್ಗಮಧ್ಯದಲ್ಲಿ ಕಾಡಾನೆಯೊಂದು ಪ್ರತ್ಯಕ್ಷಗೊಂಡ ಹಿನ್ನೆಲೆಯಲ್ಲಿ ಕಾರು ಚಲಾಯಿಸುತ್ತಿದ್ದ ಕಾರು ಚಾಲಕರೋರ್ವರು ಗಾಬರಿಗೊಂಡು ತೋಟದೊಳಗೆ ನುಗ್ಗಿ ಮರಕ್ಕೆ ಅಪ್ಪಳಿಸಿರುವ ಘಟನೆ ನಡೆದಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸಿದ್ದಾಪುರ ಸಮೀಪದ ಬಾಡಗ ಬಾಣಂಗಾಲ ಗ್ರಾಮದ ಹುಂಡಿಯ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಬ್ಯಾಂಕ್‌ವೊAದರಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ತಮ್ಮ ಕಾರಿನಲ್ಲಿ ಪಾಲಿಬೆಟ್ಟ ದಿಂದ ಹುಂಡಿ ಕಾರು ಡಿಕ್ಕಿಯಾದ ಪರಿಣಾಮ ಮರ ಎರಡು ಸೀಳಾಗಿದೆ. ಅದೃಷ್ಟವಶಾತ್ ಕಾರಿನ ಏರ್ ಬ್ಯಾಗ್ ತೆರೆದು ಕೊಂಡಿದ್ದರಿAದ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಕಾರು ಮರಕ್ಕೆ ಡಿಕ್ಕಿ ಹೊಡೆದ ರಭಸದ ಶಬ್ಧದಿಂದ ಕಾಡಾನೆ ಸ್ಥಳದಿಂದ ಕಾಲ್ಕಿತ್ತಿದೆ. ನಂತರ ಟ್ರಾö್ಯಕ್ಟರ್ ಸಹಾಯದಿಂದ ತೋಟದಿಂದ ಕಾರನ್ನು ಹೊರಕ್ಕೆ ತೆಗೆಯಲಾಯಿತು. ಬಾಡಗ ಬಾಣಂಗಾಲ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಇದ್ದು, ಬೆಳಗ್ಗಿನ ಜಾವ ವಾಯುವಿಹಾರಕ್ಕೆ ತೆರಳಲು ಭಯಪಡುವಂತಾಗಿದೆ ಎಂದು ಮಾಲ್ದಾರೆ ಗ್ರಾ.ಪಂ. ಅಧ್ಯಕ್ಷ ಸಮೀರ್ ತಿಳಿಸಿದ್ದಾರೆ.

ಇತ್ತೀಚೆಗೆ ಹುಂಡಿಯ ಕುಂಞಮಣಿ ಎಂಬವರ ಮನೆಯ ಆವರಣ ಗೋಡೆ ಯನ್ನು ಕಾಡಾನೆ ಹಾನಿಗೊಳಿಸಿತ್ತು. ಅಲ್ಲದೇ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡುಬಿಟ್ಟು ದಾಂಧಲೆ ನಡೆಸುತ್ತಿದ್ದು, ಗ್ರಾಮಸ್ಥರು ಭಯಭೀತ ರಾಗಿದ್ದು, ಕಾಡಾನೆ ಹಾವಳಿಗೆ ಶಾಶ್ವತ ಯೋಜನೆ ರೂಪಿಸಬೇಕೆಂದು ಒತ್ತಾಯಿಸಿದ್ದಾರೆ. -ವಾಸು ಎ.ಎನ್.