ಮಡಿಕೇರಿ, ಸೆ.೨೦: ಕರ್ನಾಟಕ ಜಾನಪದ ಅಕಾಡೆಮಿಯು ೨೦೨೦ ರ ಜನವರಿ ೧ ರಿಂದ ಡಿಸೆಂಬರ್ ೩೧ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಟ ೧೫೦ ಪುಟಗಳಿಗೂ ಮೇಲ್ಪಟ್ಟ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.

ಲೇಖಕರು/ ಪ್ರಕಾಶಕರು/ ಸಂಪಾದಕರು ೪ ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟಾçರ್, ಕರ್ನಾಟಕ ಜಾನಪದ ಅಕಾಡೆಮಿ, ೨ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨ ಇವರಿಗೆ ೨೦೨೧ ರ ಅಕ್ಟೋಬರ್, ೧೧ ರೊಳಗೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿ ಕೊಡುವಂತೆ ರಿಜಿಸ್ಟಾçರ್ ಕೋರಿದ್ದಾರೆ.