ನಾಪೋಕ್ಲು, ಸೆ. ೨೦: ಬೆಟ್ಟಗೇರಿ ಗ್ರಾ.ಪಂ. ವ್ಯಾಪ್ತಿಯ ಬಕ್ಕ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಷ್ಪ ವಹಿಸಿದ್ದರು. ರಕ್ತಹೀನತೆ ಮತ್ತು ಪೌಷ್ಟಿಕಾಂಶ ಇರುವ ಆಹಾರದ ಬಗ್ಗೆ ಹಿರಿಯ ಆರೋಗ್ಯ ಕಾರ್ಯಕರ್ತೆ ಜಲಜಾಕ್ಷಿ ಪೋಷಕರಿಗೆ ಮಾಹಿತಿ ನೀಡಿದರು. ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಹಾಗೂ ಲಸಿಕೆಯ ಕುರಿತು ಕಿರಿಯ ಆರೋಗ್ಯ ಕಾರ್ಯಕರ್ತೆ ಕೃತಿಕಾರಾಣಿ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರಾದ ರೋಹಿಣಿ, ಶೈಲಾ, ಶೈಲಜ, ದೇವಕ್ಕಿ, ಆಶಾ ಕಾರ್ಯಕರ್ತೆಯರು, ಪೋಷಕರು, ಗ್ರಾಮಸ್ಥರು ಪಾಲ್ಗೊಂಡಿದ್ದರು.