ಸೋಮವಾರಪೇಟೆ,ಸೆ. ೧೯: ಇಲ್ಲಿನ ನ್ಯಾಯಾಲಯದ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸ್ಥಳೀಯ ಚನ್ನಬಸಪ್ಪ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೋಕುಲ್ ಅವರು ಮಾತನಾಡಿ, ಸಂವಿಧಾನಾತ್ಮಕವಾಗಿ ಪ್ರಜೆಗಳಿಗಿರುವ ಕಾನೂನುಗಳ ಬಗ್ಗೆ ಮಾಹಿತಿ ನೀಡಿದರಲ್ಲದೇ, ಪ್ರಸ್ತುತ ಕೋವಿಡ್ ಸಾಂಕ್ರಾಮಿಕ ರೋಗದ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿವರಿಸಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರತಿಭಾ ಅವರು ಮಾತನಾಡಿ, ನ್ಯಾಯಾಲಯದಲ್ಲಿ ನಡೆಯುವ ಲೋಕ ಅದಾಲತ್‌ನ ಬಗ್ಗೆ ಜಾಗೃತಿ ಮೂಡಿಸಿದರು. ಅದಾಲತ್ ಗಳ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಸಾರ್ವಜನಿಕರು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ವಕೀಲರಾದ ವೆಂಕಟೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಆರಕ್ಷಕ ಸಿಬ್ಬಂದಿ ಗಳು, ಆರೋಗ್ಯ ಇಲಾಖಾ ಸಿಬ್ಬಂದಿ ಗಳು, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.