ಮಡಿಕೇರಿ, ಸೆ.೨೦: ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ, ಮಡಿಕೇರಿ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಖಾಲಿ ಇರುವ ಸ್ಥಾನಗಳಿಗೆ ಗೌರವ ಸಂಭಾವನೆ ಆಧಾರದ ಮೇಲೆ ನಿಗದಿಪಡಿಸಿದ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿ ಇರುವ ಹುದ್ದೆಗಳಿಗೆ ಸಂಬAಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಸಂಬAಧಿಸಿದ ಗ್ರಾಮ ಪಂಚಾಯಿತಿಗಳಿAದ ಪಡೆಯುವುದು.
ಖಾಲಿ ಇರುವ ಹುದ್ದೆಗಳ ಮೀಸಲಾತಿ ವಿವರ: ವೀರಾಜಪೇಟೆ ತಾಲೂಕಿನ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಾದ ಹೊಸೂರು, ಸಾ.ಅ(ಮ.ಅ), ಚೆಂಬೆಬೆಳ್ಳೂರು ಪ್ರವರ್ಗ-೧(ಅಂ.ವಿ) ಮತ್ತು ಕೆದಮಳ್ಳೂರು ಸಾ.ಅ(ಸಾ.ಅ). ಅರ್ಜಿ ಸಲ್ಲಿಸಲು ಅಕ್ಟೋಬರ್ ೨೧ ಕೊನೆಯ ದಿನವಾಗಿದೆ. ವಿದ್ಯಾರ್ಹತೆ ಹಾಗೂ ಇತರೆ ದಾಖಲೆಗಳನ್ನು ದೃಢೀಕರಿಸಿದ ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಂಬAಧಪಟ್ಟ ಗ್ರಾಮ ಪಂಚಾಯಿತಿ ಕಚೇರಿಗೆ ಸಲ್ಲಿಸುವುದು.
ಹೆಚ್ಚಿನ ವಿವರಗಳಿಗೆ ಮುಖ್ಯ ಗ್ರಂಥಾಲಯಾಧಿಕಾರಿಯವರ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಮಡಿಕೇರಿ ದೂ.ಸಂ. ೦೮೨೭೨ ೨೨೫೪೬೩ ಅಥವಾ ಸದರಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಅವರು ತಿಳಿಸಿದ್ದಾರೆ.